ನವದೆಹಲಿ: ದೆಹಲಿಯ ಸಿಂಘೂ ಗಡಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ತೀವ್ರಗೊಳ್ಳುತ್ತಿದೆ. ಇನ್ನೊಂದೆಡೆ ಪೆಟ್ರೋಲ್- ಡೀಸೆಲ್ ಬೆಲೆ ಹೆಚ್ಚಳವಾಗಿದೆ. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕೇಂದ್ರ ಸರ್ಕಾರ ರೈತರು ಹಾಗೂ ಬಡವರ ಬೆನ್ನು ಮುರಿಯುವ ಕೆಲಸ ಮಾಡುತ್ತಿದೆ ಎಂದಿದ್ದಾರೆ.
ಸ್ವಾತಂತ್ರ್ಯದ ನಂತರ ಇದೇ ಮೊದಲ ಬಾರಿಗೆ ದೇಶ ಅಡ್ಡ ಹಾದಿಯಲ್ಲಿ ಬಂದು ನಿಂತಿದೆ ಎಂದು ಸೋನಿಯಾ ಗಾಂಧಿ ಆರೋಪಿಸಿದ್ದಾರೆ. ಇಂಧನ ಬೆಲೆ ಹೆಚ್ಚಳ ಕುರಿತು ಆಕ್ರೋಶ ವ್ಯಕ್ತಪಡಿಸಿದ ಅವರು, 'ದುರಂತವೊಂದನ್ನು ತನ್ನ ಬೊಕ್ಕಸ ತುಂಬಿಸಿಕೊಳ್ಳುವ ಅವಕಾಶವನ್ನಾಗಿ ಕೇಂದ್ರ ಸರ್ಕಾರ ಪರಿವರ್ತಿಸಿಕೊಂಡಿದೆ' ಎಂದು ತಿಳಿಸಿದ್ದಾರೆ. ಕೇಂದ್ರ ಸರ್ಕಾರವು ತನ್ನ 'ಅಸೂಕ್ಷ್ಮತೆ'ಯಿಂದಾಗಿ ಬಡವರು, ರೈತರು ಮತ್ತು ಮಧ್ಯಮ ವರ್ಗದವರ ಬೆನ್ನನ್ನು ಮುರಿಯುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
'ಮೂರು ಕೃಷಿ ಕಾನೂನುಗಳನ್ನು ತಕ್ಷಣವೇ ರದ್ದುಪಡಿಸಬೇಕು. ರೈತರ ಎಲ್ಲಾ ಬೇಡಿಕೆಗಳನ್ನು ಈಡೇರಿಸಬೇಕೆಂದು ನಾನು ಮತ್ತೊಮ್ಮೆ ಸರ್ಕಾರಕ್ಕೆ ಮನವಿ ಮಾಡುತ್ತೇನೆ' ಎಂದು ಸೋನಿಯಾ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
PublicNext
07/01/2021 09:46 pm