ಕೋಲಾರ: ಗೋಹತ್ಯೆ ನಿಷೇಧ ಸುಗ್ರೀವಾಜ್ಞೆ–2020 ವಾಪಸ್ ಪಡೆಯುವಂತೆ ಒತ್ತಾಯಿಸಿ ಪ್ರಗತಿಪರ ಸಂಘಟನೆಗಳ ಸದಸ್ಯರು ಕೋಕಾರ ನಗರದಲ್ಲಿ ಶುಕ್ರವಾರ ಪ್ರತಿಭಟನೆ ಮಾಡಿದರು. ನಗರದ ಮೆಕ್ಕೆ ವೃತ್ತದಲ್ಲಿ ಮಾನವ ಸರಪಳಿ ರಚಿಸಿದ ಪ್ರತಿಭಟನಾಕಾರರು ಸುಗ್ರೀವಾಜ್ಞೆಯ ಪ್ರತಿ ಸುಟ್ಟು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
‘ಸರ್ಕಾರವು ವಿಧಾನ ಪರಿಷತ್‌ನಲ್ಲಿ ಗೋಹತ್ಯೆ ನಿಷೇಧ ಮಸೂದೆ ಮಂಡಿಸಿಲ್ಲ. ವಿಧಾನಸಭೆಯಲ್ಲಿ ಮಾತ್ರ ಮಸೂದೆಗೆ ಅನುಮೋದನೆ ಪಡೆದಿದ್ದ ಸರ್ಕಾರವು ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡು ರಾಜ್ಯಪಾಲರಿಂದ ಸುಗ್ರೀವಾಜ್ಞೆ ಮೂಲಕ ಮಸೂದೆ ಜಾರಿ ಮಾಡಿಸಿದೆ’ ಎಂದು ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ನಾರಾಯಣಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದರು.
ಸುಗ್ರೀವಾಜ್ಞೆ ಮೂಲಕ ಮಸೂದೆ ಜಾರಿಯಾಗಿದ್ದು ಇದು ಪ್ರಜಾಪ್ರಭುತ್ವ ವಿರೋಧಿಯಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
PublicNext
08/01/2021 05:22 pm