ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹೈಕಮಾಂಡ್ ಸೂಚನೆ ಬಳಿಕವೇ ಸಂಪುಟ ವಿಸ್ತರಣೆ: ಬಿಎಸ್‌ವೈ

ಕೊಪ್ಪಳ: ಪಕ್ಷದ ಕೇಂದ್ರದ ವರಿಷ್ಠರು ಸೂಚನೆ ನೀಡಿದ ಬಳಿಕವೇ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ನಗರದ ಬಸಾಪುರ ಏರ್‌ ಸ್ಟ್ರಿಪ್‌ನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಪರೋಕ್ಷವಾಗಿ ಸಂಪುಟ ಪುನಾರಚನೆ ಇಲ್ಲ, ಸಂಕ್ರಾಂತಿ ನಂತರ ಸಂಪುಟ ವಿಸ್ತರಣೆ ಆಗಲಿದೆ ಎಂದು ತಿಳಿಸಿದರು. ಜೊತೆಗೆ ''ಕೊರೊನಾ, ಅತಿವೃಷ್ಟಿ, ಬರಗಾಲದ ಆಪತ್ತುಗಳಿಂದಾಗಿ ನಿರೀಕ್ಷಿಸಿದಷ್ಟು ಸರ್ಕಾರದಿಂದ ಕೆಲಸ ಮಾಡಲು ಸಾಧ್ಯವಾಗಲಿಲ್ಲ. ರಾಜ್ಯದ ಆರ್ಥಿಕ ಸ್ಥಿತಿ ಸರಿ ಇಲ್ಲ. 40-50 ಸಾವಿರ ಬಜೆಟ್ ಖೋತಾ ಆಗಿದೆ. ಇವೆಲ್ಲವೂ ರಾಜ್ಯದ ಜನತೆಗೆ ಗೊತ್ತಿದೆ. ಜನರು ಸರ್ಕಾರಕ್ಕೆ ಸಹಕಾರ ನೀಡಬೇಕು'' ಎಂದು ಮನವಿ ಮಾಡಿಕೊಂಡರು.

ರಾಜ್ಯದ ಬಿಜೆಪಿ ಸಚಿವರು, ಶಾಸಕರ ಜೊತೆ ಯುವರಾಜ್ ಫೋಟೋ ತೆಗೆಸಿಕೊಂಡದ್ದು ಅಪರಾಧ ಏನಲ್ಲ. ಆದರೆ ಯುವರಾಜ್ ಪ್ರಕರಣ ತನಿಖೆ ಹಂತದಲ್ಲಿದೆ. ತನಿಖೆ ಮುಗಿದ ನಂತರ ಸತ್ಯಾಸತ್ಯತೆ ಹೊರಬೀಳಲಿದೆ ಎಂದು ಹೇಳಿದರು.

Edited By : Vijay Kumar
PublicNext

PublicNext

09/01/2021 02:54 pm

Cinque Terre

39.6 K

Cinque Terre

0

ಸಂಬಂಧಿತ ಸುದ್ದಿ