ಬೆಂಗಳೂರು: ರಾಜಕಾರಣದಲ್ಲಿ ಯಾರೂ ವೈರಿಗಳು ಅಲ್ಲ, ಮಿತ್ರರೂ ಅಲ್ಲ ಎನ್ನುವುದು ಗೊತ್ತಿರುವ ವಿಚಾರ. ವಿಧಾನಸೌದ ಕಲಾಪ, ಚುನಾವಣಾ ಪ್ರಚಾರದಲ್ಲಿ ಪರಸ್ಪರ ವಾಗ್ದಾಳಿ ನಡೆಸುವ ರಾಜಕಾರಣಿಗಳು ವೈಯಕ್ತಿಕವಾಗಿ ಆತ್ಮೀಯವಾಗಿ ಇರುತ್ತಾರೆ. ಇಂತಹದ್ದೇ ಫೋಟೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಹೌದು. ಚಾಮರಾಜಪೇಟೆಯ ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಖಾನ್ ಹಾಗೂ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ವಿಭಿನ್ನ ಸೈದ್ಧಾಂತಿಕ ವಿಚಾರ ಹೊಂದಿದವರು. ಅವರು ಪರಸ್ಪರ ಕುಶಲೋಪರಿ ವಿಚಾರಿಸಿದ್ದು ಅಷ್ಟೇ ಅಲ್ಲದೆ ಸಂಸದ ತೇಜಸ್ವಿ ಅವರು ಜಮೀರ್ ಅಹಮ್ಮದ್ ಅವರಿಗೆ ಸನ್ಮಾನ ಮಾಡಿದ್ದಾರೆ.
ಜಮೀರ್ ಅಹಮ್ಮದ್ ಅವರು ಮಗಳ ಮದುವೆಗೆ ಆಹ್ವಾನಿಸಲು ಬಿಜೆಪಿ ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಕಚೇರಿಗೆ ತೆರಳಿದ್ದಾರೆ. ಈ ವೇಳೆ ಅತಿಥಿಗೆ ಗೌರವ ನೀಡುವ ಹಿನ್ನೆಲೆಯಲ್ಲಿ ತೇಜಸ್ವಿ ಅವರು ಜಮೀರ್ ಅಹಮ್ಮದ್ ಅವರನ್ನು ಸನ್ಮಾನಿಸಿದ್ದಾರೆ. ಈ ಫೋಟೋಗೆ ನೆಟ್ಟಿಗರು ತಮ್ಮದೆ ರೀತಿಯಲ್ಲಿ ಪ್ರತಿಕ್ರಿಯೆ ನೀಡುತ್ತಿದ್ದಾರೆ.
PublicNext
09/01/2021 10:15 pm