ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಬಿಜೆಪಿ ಹೈಕಮಾಂಡ್ ಬುಲಾವ್ ನೀಡಿದ್ದು, ಈ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಇದರಿಂದಾಗಿ ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಕೊಂಚ ಖುಷಿಯಾಗಿದೆ.
ದೆಹಲಿ ಪ್ರವಾಸಕ್ಕೂ ಮುನ್ನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಿಎಂ, ''ದೆಹಲಿ ನಾಯಕರು ಕರೆದಿದ್ದಾರೆ. ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಉತ್ತಮ ಸಾಧನೆ ಮಾಡಿದೆ. ಜೊತೆಗೆ ಬೆಳಗಾವಿ ಲೋಕಸಭಾ ಕ್ಷೇತ್ರದ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣಾ ಸಿದ್ಧತೆ ಬಗ್ಗೆ ಚರ್ಚೆ ಮಾಡಲಾಗುವುದು'' ಎಂದು ಹೇಳಿದರು.
ಇದೇ ವೇಳೆ ಸಂಪುಟ ವಿಸ್ತರಣೆ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, ನಾನು ಈ ಬಗ್ಗೆ ಚರ್ಚೆ ನಡೆಸಲಿದ್ದೇನೆ ಎಂದು ತಿಳಿಸಿದರು. ಇತ್ತ ಇದೇ 16 ಮತ್ತು 17ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಇದಕ್ಕೂ ಮುನ್ನವೇ ಸಂಕ್ರಾಂತಿ ವೇಳೆಗೆ ಸಂಪುಟ ವಿಸ್ತರಣೆ ಆಗಬಹುದು ಎನ್ನಲಾಗಿದೆ.
PublicNext
10/01/2021 10:47 am