ಹೊನ್ನಾಳಿ(ದಾವಣಗೆರೆ ಜಿಲ್ಲೆ): ಕಾಂಗ್ರೆಸ್ ಪಕ್ಷಕ್ಕೆ ನಾಲ್ಕು ಶಾಪಗಳು ಕಾಡುತ್ತಿವೆ. ನಾಯಕರಲ್ಲಿ ನಾಯಕತ್ವದ ಕಿತ್ತಾಟ ಆರಂಭವಾಗಿದೆ. ಕಾಂಗ್ರೆಸ್ಸಿನ ವರ್ಚಸ್ಸು ದಿನದಿಂದ ದಿನಕ್ಕೆ ನೆಲಕಚ್ಚುತ್ತಿದೆ. ಭವಿಷ್ಯದಲ್ಲಿ ಕಾಂಗ್ರೆಸ್ ಪಕ್ಷ ಅರಬ್ಬಿ ಸಮುದ್ರ ಸೇರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಿಡಿಕಾರಿದರು.
ಪಟ್ಟಣದಲ್ಲಿ ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಗೆದ್ದ-ಸೋತ ಅಭ್ಯರ್ಥಿಗಳಿಗೆ ಸನ್ಮಾನ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಮಹಾತ್ಮ ಗಾಂಧೀಜಿ, ದೇಶದ ಸಂವಿಧಾನ ನಿರ್ಮಾತೃ ಡಾ.ಬಿ.ಆರ್. ಅಂಬೇಡ್ಕರ್, ಗೋಮಾತೆ ಹಾಗೂ ಭಾರತ ಮಾತೆಯ ಶಾಪವಿದೆ ಎಂದರು.
PublicNext
10/01/2021 08:54 pm