ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಿಜೆಪಿಯವರೇ ಗೋಮಾಂಸ ರಫ್ತು ಮಾಡ್ತಾರೆ: ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕಾಯ್ದೆಗಳ ವಿರುದ್ಧ ಕಾಂಗ್ರೆಸ್ ಪಕ್ಷ ಬೀದಿಗಿಳಿದು ಹೋರಾಟ ನಡೆಸಲಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದು ಹೋರಾಟದ ರೂಪುರೇಷೆ ಸಿದ್ಧಪಡಿಸಲಾಗುವುದು.ಜೈಲ್ ಭರೋ ಚಳವಳಿಯನ್ನೂ ಹಮ್ಮಿಕೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.ಕೇಂದ್ರ ಮತ್ತು ರಾಜ್ಯ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕಾಯಿದೆಗಳ ಹಿಂದಿನ ಸತ್ಯಾಸತ್ಯತೆಯನ್ನು ಜನರಿಗೆ ಮನವರಿಕೆ ಮಾಡಿಕೊಡುವ ಹಿನ್ನೆಲೆಯಲ್ಲಿ ಹೊರ ತಂದಿರುವ "ಐದು ಕಾಯ್ದೆಗಳು,ಅಸಂಖ್ಯಾತ ಸುಳ್ಳುಗಳು" ಕಿರು ಹೊತ್ತಿಗೆಯನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು.

ಗೋಮಾಂಸವನ್ನು ಆಮದು ಮಾಡುವವರು ಬಿಜೆಪಿಯವರೇ,ವಿಧೇಶಗಳಿಗೆ ರಫ್ತು ಮಾಡುತ್ತಿರುವವರು ಬಿಜೆಪಿ ಯವರೇ,ಆದರೆ ಒಂದು ಸಮುದಾಯವನ್ನು ಮಾತ್ರ ಗೋಹತ್ಯೆ ಮಾಡುವವರು ಎಂಬುದಾಗಿ ಬಿಂಬಿಸಲಾಗುತ್ತಿದೆ ಎಂದರು.

Edited By : Nagaraj Tulugeri
PublicNext

PublicNext

10/01/2021 11:34 pm

Cinque Terre

58.61 K

Cinque Terre

24

ಸಂಬಂಧಿತ ಸುದ್ದಿ