ಬೆಂಗಳೂರು: ನಾನು ಮಂತ್ರಿಗಿರಿ ಆಕಾಂಕ್ಷಿಯಲ್ಲ. ಅಷ್ಟೇ ಅಲ್ಲದೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂಪುಟದಲ್ಲಿ ಸಚಿವನಾಗದಿರಲು ನಿರ್ಧರಿಸಿದ್ದೇನೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ಗುಡುಗಿದ್ದಾರೆ.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನಗೆ ಸಚಿವ ಸ್ಥಾನ ಸಿಗದೇ ಇದ್ದರೂ ತೊಂದರೆಯಿಲ್ಲ. ಆದರೆ ರಾಜ್ಯದ ಅಭಿವೃದ್ಧಿಯೇ ನನ್ನ ಕನಸು. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ ಎಂದು ಹೇಳಿದರು.
''ನಾನು ಸಚಿವನಾಗಬೇಕು ಅಂತ ಸಿಎಂ ಯಡಿಯೂರಪ್ಪ ಹೇಳುವುದಿಲ್ಲ. ಹೀಗಾಗಿ ಮಂತ್ರಿಗಿರಿಗಾಗಿ ಎಂದೂ ಒತ್ತಾಯಿಸುವುದಿಲ್ಲ. ಈ ಹಿಂದೆಯೂ ನನ್ನ ಯೋಗ್ಯತೆಯ ಆಧಾರದ ಮೇಲೆ ಕೇಂದ್ರದಲ್ಲಿ ಮಂತ್ರಿಯಾಗಿದ್ದೆ. ಕಾಡಿ-ಬೇಡಿ, ಮಧ್ಯವರ್ತಿಗಳ ಮೂಲಕ ಮಂತ್ರಿಯಾಗಲು ಎಂದೂ ಪ್ರಯತ್ನಿಸುವುದಿಲ್ಲ'' ಎಂದು ಹೇಳಿದ್ದಾರೆ.
PublicNext
11/01/2021 01:00 pm