ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಾಜಿ ಸಚಿವ ಎಂ ಸಿ ಮನಗೂಳಿ ಆಸ್ಪತ್ರೆಗೆ ದಾಖಲು

ವಿಜಯಪುರ: ಸಿಂದಗಿ ಕ್ಷೇತ್ರದ ಜೆಡಿಎಸ್ ಶಾಸಕ ಹಾಗೂ ಮಾಜಿ ಸಚಿವ ಎಂ.ಸಿ.ಮನಗೂಳಿ ಅವರು ಅನಾರೋಗ್ಯದಿಂದಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈದ್ಯರ ಚಿಕಿತ್ಸೆಗೆ ಅವರು ಸ್ಪಂದಿಸಿದ್ದಾರೆ ಎಂದು ಮನಗೂಳಿ ಪುತ್ರ ಶಾಂತವೀರ ಮನಗೂಳಿ ತಿಳಿಸಿದ್ದಾರೆ.

ಅವರ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಕಳೆದ ಶನಿವಾರ ಕಲಬುರಗಿಯಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಕರೆದೊಯ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಈಗ ಅವರ ಆರೋಗ್ಯ ಚೇತರಿಸಿಕೊಂಡಿದೆ ಎಂದು ತಿಳಿಸಿದ್ದಾರೆ. ಕ್ಷೇತ್ರದ ಜನರು, ಅಭಿಮಾನಿಗಳು ಆತಂಕ ಪಡುವ ಅಗತ್ಯವಿಲ್ಲ ಎಂದು ಎಂ.ಸಿ. ಮನಗೂಳಿ ಅವರ ಪುತ್ರ ಶಾಂತವೀರ ಮನಗೂಳಿ ಹೇಳಿದ್ದಾರೆ.

Edited By : Nagaraj Tulugeri
PublicNext

PublicNext

11/01/2021 03:01 pm

Cinque Terre

29.15 K

Cinque Terre

0

ಸಂಬಂಧಿತ ಸುದ್ದಿ