ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ದೆಹಲಿಯಲ್ಲಿ ಪಕ್ಷ ನಾಯಕರನ್ನು ಭೇಟಿಯಾಗಿ ನಡೆಸಿದ ಮಾತುಕತೆ ಯಶಸ್ವಿಯಾಗಿದೆ. ಈ ಮೂಲಕ ಸಂಕ್ರಾಂತಿ ಸಿಹಿ ನೀಡಲು ಜನರಿವರಿ 13 ಇಲ್ಲವೇ 14ರಂದು ಸಂಪುಟ ವಿಸ್ತರಣೆ ಮಾಡಲು ಸಿಎಂ ಚಿಂತನೆ ನಡೆಸಿದ್ದಾರೆ ಎಂಬ ಮಾಹಿತಿ ಲಭಿಸಿದೆ.
ರಾಜ್ಯ ಸಚಿವ ಸಂಪುಟ ವಿಸ್ತರಣೆ ಜೊತೆಗೆ ಪ್ರಮುಖ ಖಾತೆಗಳ ಬದಲಾಗುವುದು ಬಹುತೇಕ ಖಚಿತವಾಗಿದೆ. ಈ ನಿಟ್ಟಿನಲ್ಲಿ ಬಸವರಾಜ ಬೊಮ್ಮಾಯಿ ಅವರ ಬಳಿ ಇರುವ ಗೃಹ ಖಾತೆಯನ್ನು ಎಸ್.ಟಿ.ಸೋಮಶೇಖರ್ ಅವರಿಗೆ ನೀಡಲಾಗುವುದು. ಜೊತೆಗೆ ಬೃಹತ್ ಕೈಗಾರಿಕೆ ಖಾತೆಯನ್ನು ಬೊಮ್ಮಾಯಿ ಅವರಿಗೆ ನೀಡಲು ಚಿಂತನೆ ನಡೆದಿದೆ ಎಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ.
PublicNext
11/01/2021 03:38 pm