ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉ.ಪ್ರ ಆಸ್ಪತ್ರೆಗಳ ಬಗ್ಗೆ ಹೇಳಿಕೆ: ಎಎಪಿ ಶಾಸಕ ಬಂಧನ

ಲಖನೌ: ಉತ್ತರ ಪ್ರದೇಶದ ಆಸ್ಪತ್ರೆಗಳ ಸ್ಥಿತಿಗತಿಗಳ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂಬ ಆರೋಪದ ಮೇಲೆ ಆಮ್ ಅದ್ಮಿ ಪಕ್ಷದ(ಎಎಪಿ) ಶಾಸಕ ಸೋಮನಾಥ್ ಭಾರ್ತಿ ಅವರನ್ನು ಸೋಮವಾರ ಅಮೇಥಿಯಲ್ಲಿ ಬಂಧಿಸಲಾಗಿದೆ.

ಸಿಆರ್‌ಪಿಸಿ ಸೆಕ್ಷನ್ 151ರ ಅಡಿಯಲ್ಲಿ ಆಪ್ ಶಾಸಕರನ್ನು ಬಂಧಿಸಲಾಗಿದೆ. ಇದಕ್ಕೂ ಮುನ್ನ ಸೋಮನಾಥ್ ಭಾರ್ತಿ ಅವರು ರಾಯಬರೇಲಿ ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿಯೊಂದಿಗೆ ಮಾತನಾಡುತ್ತಿದ್ದಾಗ ಅವರ ಮೇಲೆ ಕಪ್ಪು ಶಾಯಿ ಎರಚಲಾಗಿತ್ತು. ಶಾಯಿ ಎರಚಿದ ವ್ಯಕ್ತಿ ತಪ್ಪಿಸಿಕೊಂಡಿದ್ದಾರೆ. ಆದರೆ ಘಟನೆಯ ನಂತರ ಅಮೆಥಿಗೆ ಭೇಟಿ ನೀಡಿದ ಭಾರತಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಅಮೇಥಿ ಮತ್ತು ರಾಯಬರೇಲಿ ಪ್ರವಾಸದಲ್ಲಿರುವ ಸೋಮನಾಥ್ ಭಾರ್ತಿ ಅವರು, ಉತ್ತರ ಪ್ರದೇಶ ಆಸ್ಪತ್ರೆಗಳ ಅವ್ಯವಸ್ಥೆ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಸಂಬಂಧ ಅವರನ್ನು ಬಂಧಿಸಿ ಅಮೇಥಿಯ ಅತಿಥಿ ಗೃಹದಲ್ಲಿ ಇರಿಸಲಾಗಿದೆ.

Edited By : Nagaraj Tulugeri
PublicNext

PublicNext

11/01/2021 05:29 pm

Cinque Terre

45.88 K

Cinque Terre

3

ಸಂಬಂಧಿತ ಸುದ್ದಿ