ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಂಚಾಯತಿಯಲ್ಲೇ ಜಾತಿ-ಆದಾಯ ಪ್ರಮಾಣ ಪತ್ರ ನೀಡಲು ಚಿಂತನೆ

ಮಂಗಳೂರು: ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿಯೇ ಜಾತಿ ಮತ್ತು ಆದಾಯ ಪ್ರಮಾಣಪತ್ರ ನೀಡುವ ಯೋಜನೆಯನ್ನು ರೂಪಿಸಲಾಗುತ್ತಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಬಂಟ್ವಾಳದಲ್ಲಿ ನಡೆಯುತ್ತಿರುವ ಜನಸೇವಕ ಸಮಾವೇಶದಲ್ಲಿ ಮಾತನಾಡಿದ ಅವರು, ಕೇರಳದ ಮಾದರಿಯಲ್ಲಿ ವಿವಾಹ ನೋಂದಣಿಯನ್ನೂ ಪಂಚಾಯಿತಿ ಮಟ್ಟದಲ್ಲಿಯೇ ಮಾಡಲು ಚಿಂತನೆ ನಡೆಸಲಾಗುತ್ತಿದೆ. ಜತೆಗೆ ಜನನ–ಮರಣ ಪ್ರಮಾಣಪತ್ರಗಳನ್ನೂ ಪಂಚಾಯಿತಿಗಳಲ್ಲೇ ನೀಡಲಾಗುವುದು. ಗ್ರಾಮ ಪಂಚಾಯತಿ ಸದಸ್ಯರಿಗೆ ₹1 ಸಾವಿರ ಗೌರವ ಧನವಿದೆ. ಅದನ್ನು ₹2 ಸಾವಿರಕ್ಕೆ ಹೆಚ್ಚಿಸುವ ಉದ್ದೇಶ ಇದೆ. ಇದಕ್ಕೆ ₹100 ಕೋಟಿ ಅನುದಾನ ಬೇಕು ಎಂದು ತಿಳಿಸಿದರು.

Edited By : Nagaraj Tulugeri
PublicNext

PublicNext

11/01/2021 07:41 pm

Cinque Terre

68.17 K

Cinque Terre

5

ಸಂಬಂಧಿತ ಸುದ್ದಿ