ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್ : ನಾಳೆ ಸಂಜೆ 4 ಕ್ಕೆ ನೂತನ ಸಚಿವರ ಪ್ರಮಾಣ ವಚನ

ಬೆಂಗಳೂರು : ಸಪ್ತ ಸಚಿವರ ಪ್ರಮಾಣ ವಚನ ನಾಳೆ ಸಂಜೆ 4ಕ್ಕೆ ನಡೆಯಲಿದೆ ಎಂದು ಸಿಎಂ ಬಿಎಸ್ ವೈ ಹೇಳಿದ್ದಾರೆ.

ಬಿಜೆಪಿ ಹೈಕಮಾಂಡ್ ಸಚಿವ ಸಂಪುಟ ವಿಸ್ತರಣೆಗೆ ಅಸ್ತು ಎಂದಿದೆ. ಇದರಿಂದಾಗಿ ರಾಜ್ಯ ರಾಜಕಾರಣದಲ್ಲಿ ರಾಜಕೀಯ ಚಟುವಟಿಕೆಗಳು ಗದಿಗೆದರಿವೆ. ಹಾಗಾಗಿ ನಾಳೆ ಸಂಜೆ 4 ಗಂಟೆಗೆ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್ ಮಾಡಲಾಗಿದೆ.

ಈ ಹಿನ್ನೆಲೆ ಸಿಎಂ ಬಿಎಸ್ ಯಡಿಯೂರಪ್ಪ ಇಂದು ರಾಜ್ಯಪಾಲ ವಜುಭಾಯಿ ವಾಲಾರನ್ನು ಭೇಟಿ ಮಾಡಿದ್ದಾರೆ.

ಇಂದು ರಾಜಭವನದಲ್ಲಿ ಸ್ವಾಮಿ ವಿವೇಕಾನಂದ ಭವನ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ನಂತರ ಗವರ್ನರ್ ಅವರಿಗೆ ನೂತನ ಸಚಿವರ ಪಟ್ಟಿ ಕೊಟ್ಟು, ಬಳಿಕ ಪದಗ್ರಹಣಕ್ಕೆ ಸಿಎಂ ಸಮಯ ನಿಗದಿಪಡಿಸಲಿದ್ದಾರೆ.

ಸದ್ಯ ಖಾಲಿಯಿರುವ 7 ಸ್ಥಾನಗಳನ್ನು ಮಾತ್ರ ತುಂಬಲು ಯಡಿಯೂರಪ್ಪ ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ. ಇನ್ನು ಯಾರಿಗೆ ಯಾವ ಖಾತೆ ನೀಡಲಿದ್ದಾರೆ ಎನ್ನುವುದು ಅಂತಿಮವಾಗಿಲ್ಲ.

Edited By : Nirmala Aralikatti
PublicNext

PublicNext

12/01/2021 11:20 am

Cinque Terre

81.19 K

Cinque Terre

4

ಸಂಬಂಧಿತ ಸುದ್ದಿ