ಕಲಬುರ್ಗಿ: ಒಬ್ಬರಲ್ಲ 20 ಜನ ರಾಹುಲ್ ಗಾಂಧಿಗಳು ಬಂದರೂ ಪ್ರಧಾನಿ ಮೋದಿಯವರನ್ನು ಸರಿಗಟ್ಟಲು ಸಾಧ್ಯವಿಲ್ಲ. ಕೇವಲ ಆಂತರಿಕ ಕಚ್ಚಾಟದಲ್ಲಿ ಮುಳುಗಿರುವ ಕಾಂಗ್ರೆಸ್ ನಾಯಕರಿಗೆ ಜನಸಾಮಾನ್ಯರ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಕಲಬುರ್ಗಿಯ ಎನ್.ವಿ. ಕಾಲೇಜಿನ ಸಭಾಂಗಣದಲ್ಲಿ ಸೋಮವಾರ ಬಿಜೆಪಿ ಹಮ್ಮಿಕೊಂಡಿದ್ದ ಜನಸೇವಕ ಸಮಾವೇಶದಲ್ಲಿ, ನೂತನವಾಗಿ ಆಯ್ಕೆಯಾದ ಪಕ್ಷ ಬೆಂಬಲಿತ ಗ್ರಾ.ಪಂ ಸದಸ್ಯರ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಅವರು, ‘ರೈತರು ಬೀದಿಯಲ್ಲಿದ್ದರೆ ಅವರೊಂದಿಗೆ ಇರುವುದು ಬಿಟ್ಟು ರಾಹುಲ್ ಗಾಂಧಿ ಇಟಲಿಗೆ ಪಲಾಯನ ಮಾಡಿದ್ದಾರೆ. ರಾಜ್ಯದಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ ಅವರ ಆಂತರಿಕ ಕಚ್ಚಾಟ ಮಿತಿ ಮೀರಿದೆ. ಅವರಲ್ಲಿ ಕಾರ್ಯಕರ್ತರೇ ಇಲ್ಲ. ಎಲ್ಲರೂ ನಾಯಕರು. ಕಾಂಗ್ರೆಸ್ ಪಕ್ಷದಲ್ಲಿ ಎಲ್ಲರೂ ವೇದಿಕೆ ಹತ್ತುವವರೇ ಇದ್ದಾರೆ. ವೇದಿಕೆ ಮುಂದೆ ಇರುವವರು ಯಾರೂ ಇಲ್ಲ ಎಂದು ಜಗದೀಶ್ ಶೆಟ್ಟರ್ ಟೀಕಿಸಿದರು.
PublicNext
12/01/2021 11:47 am