ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊನೆಗೂ ಕತ್ತಿ ಕೈ ಹಿಡಿದ ಸಿಎಂ.!

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಚಿವ ಸಂಪುಟ ನಾಳೆ ವಿಸ್ತರಣೆಯಾಗಲಿದೆ. ಶಾಸಕ ಉಮೇಶ್‌ ಕತ್ತಿ ಅವರಿಗೆ ಕೊನೆಗೂ ಮಂತ್ರಿಗಿರಿ ದೊರೆಯುವ ಸಾಧ್ಯತೆ ಹೆಚ್ಚಾಗಿದೆ.

ಸಿಎಂ ಯಡಿಯೂರಪ್ಪ ಅವರು ಈಗಾಗಲೇ ನೂತನ ಸಚಿವ ಪಟ್ಟಿಯನ್ನು ರಾಜ್ಯಪಾಲರಿಗೆ ಕಳುಹಿಸಿದ್ದು, ನಾಳೆ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಕಳೆದ ಎರಡು ಬಾರಿ ಸಂಪುಟ ವಿಸ್ತರಣೆಯಾದಾಗ ಅವಕಾಶ ವಂಚಿತರಾಗಿದ್ದ ಉಮೇಶ್ ಕತ್ತಿ ಅವರಿಗೆ ಈ ಬಾರಿ ಮಂತ್ರಿಗಿರಿ ಪಕ್ಕಾ ಎಂಬ ಮಾಹಿತಿ ಲಭಿಸಿದೆ.

ನಾಳೆ ಸಂಜೆ 4ಕ್ಕೆ ನೂತನ ಸಚಿವರ ಪದಗ್ರಹಣ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಉಮೇಶ್ ಕತ್ತಿಗೆ ಸಿಎಂ ಬುಲಾವ್ ನೀಡಿದ್ದಾರೆ. ಸಿಎಂ ಸೂಚನೆ ಮೇರೆಗೆ ಕತ್ತಿ ಬೆಳಗಾವಿಯಿಂದ ಬೆಂಗಳೂರಿಗೆ ಹೊರಟಿದ್ದಾರೆ. ಇಂದು ಸಂಜೆ ಸಿಎಂ ಯಡಿಯೂರಪ್ಪ ಅವರನ್ನು ಉಮೇಶ್‌ ಕತ್ತಿ ಭೇಟಿಯಾಗಲಿದ್ದಾರೆ ಎನ್ನಲಾಗಿದೆ.

Edited By : Vijay Kumar
PublicNext

PublicNext

12/01/2021 04:09 pm

Cinque Terre

49.48 K

Cinque Terre

1

ಸಂಬಂಧಿತ ಸುದ್ದಿ