ನವದೆಹಲಿ: ಪೊಂಗಲ್ ನಿಮಿತ್ತ ಜನವರಿ 14ರಂದು ತಮಿಳುನಾಡಿನಲ್ಲಿ ನಡೆಯಲಿರುವ ಜಲ್ಲಿಕಟ್ಟುಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಜರಾಗಲಿದ್ದಾರೆ.
ತಮಿಳುನಾಡು ವಿಧಾನಸಭೆ ಚುನಾವಣೆ ಘೋಷಣೆಯಾದ ಬಳಿಕ ಇದೇ ಮೊದಲ ಬಾರಿಗೆ ರಾಹುಲ್ ಗಾಂಧಿ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಇತ್ತ ಕೊರೊನಾ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರವು ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದು, ಜಲ್ಲಿಕಟ್ಟು ನಿರ್ಬಂಧಿತ ಅನುಮತಿ ನೀಡಲಾಗಿದೆ. 150 ಮಂದಿ ಮಾತ್ರ ಭಾಗವಹಿಸಬೇಕು, ಆಚರಣೆಯಲ್ಲಿ ಪಾಲ್ಗೊಳ್ಳುವ ಸ್ಪರ್ಧಿಗಳು ಸೇರಿದಂತೆ ಎಲ್ಲರೂ ಮುಂಚಿತವಾಗಿ ನೋಂದಣಿ ಮಾಡಿಕೊಂಡಿರಬೇಕು. ಕೋವಿಡ್ 19 ನೆಗಟಿವ್ ಪ್ರಮಾಣ ಪತ್ರ ಕಡ್ಡಾಯವಾಗಿ ಹೊಂದಿರಬೇಕು. ಪ್ರೇಕ್ಷಕರ ಸಂಖ್ಯೆ ಕೂಡ ಶೇ.50 ರಷ್ಟು ತಗ್ಗಿರಬೇಕು ಎಂದು ತಿಳಿಸಿದೆ.
PublicNext
12/01/2021 06:10 pm