ಬೆಂಗಳೂರು: ಸಿಎಂ ಯಡಿಯೂರಪ್ಪ ನೇತೃತ್ವದ ರಾಜ್ಯ ಸರಕಾರವು ತನ್ನ ಸಂಪುಟ ವಿಸ್ತರಣೆಯನ್ನು ನಡೆಸಿದ್ದು, ಒಟ್ಟು 7 ಮಂದಿ ನೂತನ ಶಾಸಕರನ್ನು ಸಚಿವರನ್ನಾಗಿ ಆಯ್ಕೆ ಮಾಡಲಾಗಿದೆ.
ಉಮೇಶ ಕತ್ತಿ, ಅರವಿಂದ ಲಿಂಬಾವಳಿ, ಮುರುಗೇಶ ನಿರಾಣಿ, ಎಸ್.ಅಂಗಾರ, ಎಂ.ಟಿ.ಬಿ.ನಾಗರಾಜ್, ಆರ್.ಶಂಕರ್, ಸಿ.ಪಿ.ಯೋಗೇಶ್ವರ್ ರನ್ನು ಸಂಪುಟಕ್ಕೆ ಸೇರ್ಪಡೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.
ಸಂಪುಟದಲ್ಲಿ ಖಾಲಿಯಿರುವ 7 ಸ್ಥಾನಗಳ ಭರ್ತಿಗೆ 6 ಜನರ ಹೆಸರುಗಳನ್ನ ಸಿಎಂ ನಿನ್ನೆಯೇ ಅಂತಿಮಗೊಳಿಸಿದ್ರು. ಆದರೆ 7ನೇ ಸ್ಥಾನಕ್ಕೆ ಪರಿಷತ್ ಸದಸ್ಯ ಸಿ.ಪಿ ಯೋಗೇಶ್ವರ್ ಹಾಗೂ ಶಾಸಕ ಮುನಿರತ್ನ ನಡುವೆ ಟಫ್ ಫೈಟ್ ಏರ್ಪಟ್ಟಿತ್ತು.
ಇಬ್ಬರಲ್ಲಿ ಒಬ್ಬರನ್ನ ಮಾತ್ರ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಬೇಕಿದ್ದ ಹಿನ್ನೆಲೆ ನಿನ್ನೆ ತಡರಾತ್ರಿವರೆಗೂ ಸಿಎಂ ಸಭೆ ನಡೆಸಿದ್ದರು.
ಇಂದು ಬೆಳಗ್ಗೆ ಕೂಡ ಡಿಸಿಎಂ ಲಕ್ಷ್ಮಣ ಸವದಿ, ಸಚಿವರಾದ ಬಸವರಾಜ ಬೊಮ್ಮಾಯಿ ಮತ್ತು ಆರ್. ಅಶೋಕ್ ಜೊತೆ ಸಭೆ ನಡೆಸಿ ಇದೀಗ ಸಿ.ಪಿ ಯೋಗೇಶ್ವರ್ ಅವರ ಹೆಸರು ಅಂತಿಮ ಪಟ್ಟಿಯಲ್ಲಿ ಸೇರ್ಪಡೆಯಾಗಿದ್ದು ಅವರಿಗೆ ಸಚಿವ ಸ್ಥಾನ ಫಿಕ್ಸ್ ಆಗಿದೆ.
ಇದರಿಂದ ಮುನಿರತ್ನಗೆ ನಿರಾಸೆ ಉಂಟಾಗಿದೆ.
PublicNext
13/01/2021 11:48 am