ಉಡುಪಿ: ನಮ್ಮ ದೇಶದ ಜನರ ಆರೋಗ್ಯಕ್ಕಾಗಿ ನಮ್ಮ ದೇಶದಲ್ಲೇ ಲಸಿಕೆ ತಯಾರಾಗಿದೆ. ಆದರೂ ಕೆಲವು ರಾಜಕೀಯ ಪಕ್ಷಗಳು ಈ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾಣ ಕಾರ್ಯದರ್ಶಿ ಸಿ.ಟಿ ರವಿ ಕಿಡಿಕಾರಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ಪ್ರಧಾನಿ ಮೋದಿ ಸ್ಪಷ್ಟವಾಗಿ, ಆರೋಗ್ಯ ಕಾರ್ಯಕರ್ತರಿಗೆ ಮೊದಲು, ನಂತರ 50 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ನಿರೋಧಕ ಲಸಿಕೆ ನೀಡಲಾಗುತ್ತದೆ. ಈ ಬಗ್ಗೆ ಎಲ್ಲಾ ಅಗತ್ಯ ಎಚ್ಚರಿಕೆಯ ಕ್ರಮಗಳನ್ನು ವಹಿಸಲಾಗಿದೆ ಎಂದಿದ್ದಾರೆ. ಜನರು ಕೂಡಾ ಕೋವಿಡ್ ಲಸಿಕೆಯ ಮೇಲೆ ವಿಶ್ವಾಸ ಇಟ್ಟಿದ್ದಾರೆ. ಆದರೆ ಕೆಲವು ಪಕ್ಷಗಳು ತಾನೂ ಮಾಡೋದಿಲ್ಲ, ಮಾಡುವವರಿಗೂ ಬಿಡುವುದಿಲ್ಲ ಎಂಬಂತೆ ಆಡುತ್ತಿದ್ದಾರೆ. ಅವರು ತಮ್ಮ ಮನಃಸ್ಥಿತಿ ಬದಲಾಯಿಸಿಕೊಳ್ಳಲಿ. ಇಲ್ಲದಿದ್ದರೆ ಅವರನ್ನು ಜನರು ದೇಶದ ರಾಜಕಾರಣದಿಂದ ಅಳಿಸಿ ಹಾಕುತ್ತಾರೆ ಎಂದು ಎಚ್ಚರಿಸಿದರು.
PublicNext
13/01/2021 12:25 pm