ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಂಪುಟ ವಿಸ್ತರಣೆ ಬೆನ್ನಲ್ಲೇ : ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಂಪುಟ ವಿಸ್ತರಣೆ ಯಾಗುತ್ತಿರುವ ಬೆನ್ನಲ್ಲೇ ನಿರೀಕ್ಷೆಯಂತೆ ಬಿಜೆಪಿಯಲ್ಲಿ ಅಸಮಾಧಾನದ ಭುಗಿಲೆದ್ದಿದೆ.

ಶಾಸಕರ ಹೆಸರನ್ನು ರಾಜಭವನಕ್ಕೆ ಕಳುಹಿಸಿದ ಬೆನ್ನಲ್ಲೇ ಆಕಾಂಕ್ಷಿಗಳ ಆಕ್ರೋಶದ ಕಟ್ಟೆಯೊಡೆದಿದೆ.

ಸಂಪುಟ ವಿಸ್ತರಣೆಯಲ್ಲಿ ತಮಗೆ ಸ್ಥಾನ ಸಿಗದಿದ್ದಕ್ಕೆ ಮಾಜಿ ಸಚಿವ ಎಚ್ ವಿಶ್ವನಾಥ್ ಸಿಎಂ ಯಡಿಯೂರಪ್ಪ ವಿರುದ್ಧ ಗರಂ ಆಗಿದ್ದಾರೆ.

ಯೋಗೇಶ್ವರ್ ಅವರಿಗೆ ಸ್ಥಾನ ನೀಡಿರುವುದಕ್ಕೆ ಬಹಿರಂಗವಾಗಿಯೇ ಅಕ್ರೋಶ ವ್ಯಕ್ತ ಪಡಿಸಿದ್ದಾರೆ.

ಯೋಗೇಶ್ವರ್ ಒಬ್ಬ ಫ್ರಾಡ್, ಅವನಿಗೆ ಏಕೆ ಸ್ಥಾನ ನೀಡಿದ್ದೀರಾ, ಅವನೇನಾದರೂ ರಾಜಿನಾಮೆ ನೀಡಿ ಬಂದಿದ್ದಾನಾ? ಅಥವಾ ಯಡಿಯೂರಪ್ಪ ಅವರಿಗೆ ಬ್ಲ್ಯಾಕ್ ಮೇಲ್ ಮಾಡಿ ಸಚಿವ ಸ್ಥಾನ ಪಡೆದುಕೊಂಡಿದ್ದಾನಾ , ಯಡಿಯೂರಪ್ಪನವರೇ ನೀವು ಕೊಟ್ಟ ಮಾತಿಗೆ ತಪ್ಪಿದ್ದೀರಾ, ಸಿದ್ದಲಿಂಗೇಶ್ವರ ನಿಮಗೆ ಒಳ್ಳೆಯದು ಮಾಡುವುದಿಲ್ಲ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಇತ್ತ ಸಚಿವ ಸ್ಥಾನ ಕೈ ತಪ್ಪಿದ್ದಕ್ಕೆ ಶಾಸಕ ರೇಣುಚಾರ್ಯ ಬೇಸರ ವ್ಯಕ್ತಪಡಿಸಲಾಗದೆ ತಳತಳಗೊಳ್ಳುತ್ತಿದ್ದಾರೆ.

ಸುದ್ದಿಗಾರರ ಮುಂದೆ ತಮ್ಮ ಅಳಲನ್ನುತೋಡಿಕೊಂಡಿದ್ದಾರೆ. ಹೊನ್ನಾಳಿ ಕ್ಷೇತ್ರದ ಜನರೇ ನನಗೆ ದೇವರು, ನನ್ನ ಕ್ಷೇತ್ರದ ಜನ ನನ್ನ ಕೈ ಹಿಡಿದಿದ್ದಾರೆ. ನನಗೆ ಸಚಿವ ಸ್ಥಾನ ಸಿಗದಿರೋದಕ್ಕೆ ಕ್ಷೇತ್ರದ ಜನರೇ ಮುಂದೆ ಉತ್ತರ ಕೊಡ್ತಾರೆ. ಒಂದು ಬಾರಿ ನಾನು ಸೋತೆ ಅದು ನನ್ನ ಸ್ವಯಂ ಕೃತ ಅಪರಾಧ, ನನಗೆ ಸಾಮರ್ಥ್ಯ ಇಲ್ಲ, ಅಸಮರ್ಥ ನಾನು ಎಂದು ಶಾಸಕ ರೇಣುಕಾಚಾರ್ಯ ಹೇಳಿದ್ದಾರೆ.

ನಾನು ಸೋತಾಗಲೂ 63 ಸಾವಿರ ಮತ ಪಡೆದಿದ್ದೆ. ಹಣ ಖರ್ಚು ಮಾಡದೇ ಗೆದ್ದಿದ್ದೇನೆ. ಲಾಬಿ ಮಾಡುವುದಿದ್ದರೆ ಬೆಂಗಳೂರಿನಲ್ಲೇ ಇರಬಹುದಿತ್ತು. ಆದರೆ, ಕ್ಷೇತ್ರದ ಜನರ ಬಳಿ ಇದ್ದೆ ಎಂದಿದ್ದಾರೆ.

ಸಚಿವ ಸ್ಥಾನವೆಂದರೆ ಬರೀ ಬೆಂಗಳೂರು, ಬೆಳಗಾವಿಗಷ್ಟೇ ಸೀಮಿತವಾ? ರಾಜ್ಯದಲ್ಲಿ ಇವೇ ಎರಡು ಊರು ಇರುವುದಾ? ಭೌಗೋಳಿಕವಾಗಿ ಮಧ್ಯ ಕರ್ನಾಟಕದ ದಾವಣಗೆರೆ ಕಡೆಗಣಿಸುವುದು ಸರಿಯಲ್ಲ ಎಂದು ಹೇಳಿದ್ದಾರೆ.

ಯಡಿಯೂರಪ್ಪನವರೇ ಮಂತ್ರಿಮಂಡಲ ವಿಸ್ತರಣೆಯಲ್ಲಿ ಸಚಿವರ ಆಯ್ಕೆ ಪ್ರಕ್ರಿಯೆಯ ಮಾನದಂಡಗಳೇನು? ನಿಮಗೆ, ನಮ್ಮ ರಾಜ್ಯ ಮತ್ತು ರಾಷ್ಟ್ರದ ನಾಯಕರುಗಳಿಗೆ ನಿಷ್ಟಾವಂತ ಯುವ ಕಾರ್ಯಕರ್ತರು ಕಾಣುತ್ತಿಲ್ಲವೆ? ನಮ್ಮ ಕಷ್ಟ ನಷ್ಟಗಳನ್ನು ಆಲಿಸುತ್ತಿದ್ದ ಅನಂತಕುಮಾರ್ ಇಲ್ಲದಿರುವಿಕೆ ಎದ್ದು ಕಾಣುತ್ತಿದೆ ಎಂದು ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಕಿಡಿಕಾರಿದ್ದಾರೆ.

Edited By : Nirmala Aralikatti
PublicNext

PublicNext

13/01/2021 12:56 pm

Cinque Terre

59.92 K

Cinque Terre

5

ಸಂಬಂಧಿತ ಸುದ್ದಿ