ಬೆಂಗಳೂರು: ಸಿಎಂ ಯಡಿಯೂರಪ್ಪ ಸೂಚನೆಯಂತೆ ಎಚ್ ನಾಗೇಶ್ ತಮ್ಮ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಪಕ್ಷೇತರ ಶಾಸಕರಾಗಿ ಆಯ್ಕೆಯಾಗಿದ್ದ ಎಚ್ ನಾಗೇಶ್, ನಂತರ ಬಿಜೆಪಿ ಸೇರಿಕೊಂಡು ಮಂತ್ರಿ ಸ್ಥಾನ ಗಿಟ್ಟಿಸಿಕೊಂಡಿದ್ದರು. ಇದು ಮೂಲ ಬಿಜೆಪಿಗರಲ್ಲಿ ಅಸಮಾಧಾನ ತಂದಿತ್ತು.
ಇಂದು ಸಚಿವ ಸಂಪುಟ ವಿಸ್ತರಣೆಯ ಅಂತಿಮ ಪಟ್ಟಿ ಹೊರಬರಲಿದೆ. ಹೀಗಾಗಿ ರಾಜೀನಾಮೆ ನೀಡುವಂತೆ ಎಚ್ ನಾಗೇಶ್ ಅವರಿಗೆ ಸಿಎಂ ಯಡಿಯೂರಪ್ಪ ಸೂಚಿಸಿದ ಹಿನ್ನಲೆಯಲ್ಲಿ ಒಲ್ಲದ ಮನಸ್ಸಿನಿಂದಲೇ ಎಚ್ ನಾಗೇಶ್ ರಾಜೀನಾಮೆ ನೀಡಿದ್ದಾರೆ.
PublicNext
13/01/2021 01:07 pm