ಬೆಳಗಾವಿ: ಸಿಎಂ ಯಡಿಯೂರಪ್ಪ ನೇತೃತ್ವದ ರಾಜ್ಯ ಸರಕಾರವು ತನ್ನ ಸಂಪುಟ ವಿಸ್ತರಣೆಯನ್ನು ನಡೆಸಿದ್ದು, ಒಟ್ಟು 7 ಮಂದಿ ನೂತನ ಶಾಸಕರನ್ನು ಸಚಿವರನ್ನಾಗಿ ಆಯ್ಕೆ ಮಾಡಲಾಗಿದೆ.
ಇತ್ತ ಸಚಿವ ಸ್ಥಾನ ಸಿಗದವರು ಸರ್ಕಾರ ವಿರುದ್ಧ ಕೆಂಡಾಮಂಡಲರಾಗಿದ್ದಾರೆ.
ಈ ವಿಷಮ ಪರಿಸ್ಥಿತಿಯಲ್ಲಿ ಸಹುಕಾರ ಹೊಸ ಬಾಂಬ್ ಸಿಡಿಸಿದ್ದಾರೆ. ಅದು ಏನು ಅಂದ್ರೆ ಮಾರ್ಚ್- ಏಪ್ರಿಲ್ ನಲ್ಲಿ ದೊಡ್ಡ ಮಟ್ಟದಲ್ಲಿ ಸಂಪುಟ ಪುನಾರಚನೆ ಆಗುತ್ತದೆ. ಸಚಿವ ಸ್ಥಾನ ತಪ್ಪಿದವರಿಗೆ ಆಗ ಸ್ಥಾನ ಸಿಗುವ ವಿಶ್ವಾಸವಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೊಸಬಾಂಬ್ ಸಿಡಿಸಿದರು.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂದು ಏಳು ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡುತ್ತಿದ್ದಾರೆ.
ಕಲ್ಬುರ್ಗಿಯಲ್ಲಿ ಪಕ್ಷ ಕಟ್ಟಿ ದೊಡ್ಡ ವ್ಯಕ್ತಿ ಸೋಲಿಸಿದವರು ಮಾಲೀಕಯ್ಯ ಗುತ್ತೇದಾರಗೂ ಸಚಿವ ಸ್ಥಾನ ಸಿಗಬೇಕಿದೆ. ಮಾಲೀಕಯ್ಯ ಗುತ್ತೆದಾರ ನನಗಿಂತ ಸ್ಟ್ರಾಂಗ್ ಇದ್ದಾರೆ. ಅವರಿಗೆ ಸ್ಥಾನಮಾನ ಸಿಗಬೇಕು. ನಮ್ಮ ಟೀಂ ನಲ್ಲಿ ಇನ್ನೂ ಐವರಿಗೆ ಸಚಿವ ಸ್ಥಾನ ಸಿಗಬೇಕಾಗಿದೆ.
ಎಚ್.ವಿಶ್ವನಾಥ ಸಚಿವರಾಗಲು ಕಾನೂನು ತೊಡಕಿದೆ. ನಾಗೇಶರನ್ನು ಸಚಿವ ಸ್ಥಾನದಿಂದ ಕೈ ಬಿಡುತ್ತಿಲ್ಲ. ಸರ್ಕಾರ ಬರಲು ಯೋಗೀಶ್ವರ್ ಪ್ರಮುಖ ಮಾತ್ರ ವಹಿಸಿದ್ದಾರೆ. ಯೋಗೀಶ್ವರ್ ಗೆ ಸ್ಥಾನ ಕೊಟ್ಟಿದ್ದಕ್ಕೆ ಬಹಳ ಸಂತೋಷವಾಗಿದೆ ಎಂದು ಹೇಳಿದರು.
ಬಿಎಸ್ವೈ ವಿರುದ್ಧ ಎಚ್.ವಿಶ್ವನಾಥ್ ಆಕ್ರೋಶ ವ್ಯಕ್ತಪಡಿಸಿದ್ದಕ್ಕೆ ಪ್ರತಿಕ್ರಿಯಿಸಿದ ರಮೇಶ ಜಾರಕಿಹೊಳಿ, ಎಚ್.ವಿಶ್ವನಾಥ ಹಿರಿಯರು. ಅವರು ಮಾತನಾಡುವುದು ಆಶೀರ್ವಾದ ಅಂದುಕೊಳ್ಳೋಣ ಎಂದರು.
PublicNext
13/01/2021 01:24 pm