ಬೆಂಗಳೂರು: ಕೊನೆಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರ್ಕಾರ ಸಚಿವ ಸಂಪುಟ ವಿಸ್ತರಣೆ ಆಗಿದ್ದು, ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಏಳು ಜನ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ರಾಜಭವನದ ಗಾಜಿನ ಮನೆಯಲ್ಲಿ ಮಧ್ಯಾಹ್ನ 3:50ಕ್ಕೆ ನೂತನ ಸಚಿವರ ಪದಗ್ರಹಣ ಕಾರ್ಯಕ್ಕೆ ರಾಷ್ಟ್ರಗೀತೆ ಮೂಲಕ ಚಾಲನೆ ನೀಡಲಾಯಿತು. ನೂತನ ಸಚಿವರಿಗೆ ರಾಜ್ಯಪಾಲರು ಪ್ರಮಾಣವಚನ ಬೋಧಿಸಿದರು. ಮೊದಲಿಗೆ ಸಂಪುಟ ದರ್ಜೆ ಸಚಿವರಾಗಿ ಉಮೇಶ್ ಕತ್ತಿ ಪ್ರಮಾಣವಚನ ಸ್ವೀಕರಿಸಿದರು. ಬಳಿಕ ಮುರುಗೇಶ್ ರುದ್ರಪ್ಪ ನಿರಾಣಿ, ಅರವಿಂದ್ ಲಿಂಬಾವಳಿ, ಎಂಟಿಬಿ ನಾಗರಾಜ್, ಆರ್.ಶಂಕರ್ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಬಿಜೆಪಿ ಸರ್ಕಾರ ರಚನೆ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದ ಸಿಪಿ ಯೋಗೇಶ್ವರ್, ದಕ್ಷಿಣ ಕನ್ನಡದ ಬಿಜೆಪಿ ನಾಯಕ ಎಸ್.ಅಂಗಾರ ಕೂಡ ಸಚಿವ ಸ್ಥಾನ ಪಡೆಯುವಲ್ಲಿ ಯಶಸ್ವಿಯಾದರು. ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಿಎಂ ಪುತ್ರ ವಿಜಯೇಂದ್ರ ಸೇರಿದಂತೆ ಹಲವು ಬಿಜೆಪಿ ನಾಯಕರು ಭಾಗಿಯಾಗಿದ್ದರು.
PublicNext
13/01/2021 04:49 pm