ವಿಜಯಪುರ: ಹೈಕಮಾಂಡ್‌ಗೆ ಬ್ಲ್ಯಾಕ್ಮೇಲ್ ಮಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆಗ್ರಹಿಸಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಸಿಎಂ ಯಡಿಯೂರಪ್ಪ ವೀರಶೈವ ಲಿಂಗಾಯಿತರ ಹೆಸರಿನಲ್ಲಿ ಬಿಜೆಪಿ ಹೈಕಮಾಂಡ್ ನಾಯಕರಿಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ. ಇದೇ ಕಾರಣಕ್ಕೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಅವರಿಗೆ ಮನಸ್ಸಿಲ್ಲದಿದ್ದರೂ ಸಚಿವ ಸಂಪುಟಕ್ಕೆ ಮೂವರನ್ನು ಸೇರಿಸಿಕೊಳ್ಳಲು ಅನುಮತಿ ನೀಡಿದ್ದಾರೆ ಎಂದು ಬಾಂಬ್ ಸಿಡಿಸಿದ್ದಾರೆ.
PublicNext
13/01/2021 05:05 pm