ಮೈಸೂರು: ಈ ಸಲದ ಬಜೆಟ್ ಮಂಡನೆಯಾಗುವವರೆಗೂ ಯಡಿಯೂರಪ್ಪ ಸಿಎಂ ಆಗಿ ಮುಂದುವರೆಯಬಹುದು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನಗಿರುವ ಮಾಹಿತಿ ಪ್ರಕಾರ ಸಿಎಂ ಯಡಿಯೂರಪ್ಪ ಬದಲಾವಣೆ ಆಗಬೇಕಿತ್ತು. ಆದರೆ, ಈಗಿನ ಸಚಿವ ಸಂಪುಟ ವಿಸ್ತರಣೆ ನಂತರ ಬಜೆಟ್ವರೆಗೂ ಇವರು ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ ಅನ್ನಿಸುತ್ತೆ ಎನ್ನುವ ಮೂಲಕ ಈವರೆಗೆ ಸಿಎಂ ಬದಲಾವಣೆ ಆಗ್ತಾರೆ ಎಂಬ ಹೇಳಿಕೆಗೆ ವ್ಯತಿರಿಕ್ತವಾಗಿ ಮಾತನಾಡಿದ್ದಾರೆ.
ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. 7 ಜನರನ್ನ ಸಚಿವ ಸಂಪುಟಕ್ಕೆ ತೆಗೆದುಕೊಂಡರೂ ಸರ್ಕಾರ ಟೇಕ್ ಆಫ್ ಆಗುವುದಿಲ್ಲ. ಏಕೆಂದರೆ ಸರ್ಕಾರ ಸಚಿವ ಸಂಪುಟ ವಿಸ್ತರಣೆಯ ನಂತರ ಮತ್ತಷ್ಟು ಅಧೋಗತಿಗೆ ಹೋಗಲಿದೆ ಎಂದು ಸಿದ್ದರಾಮಯ್ಯ ಭವಿಷ್ಯ ನುಡಿದರು.
PublicNext
13/01/2021 08:12 pm