ಶಿವಮೊಗ್ಗ: ಸುಪ್ರೀಂ ಕೋರ್ಟ್ ಕೃಷಿ ಕಾಯ್ದೆಗಳಿಗೆ ತಡೆ ನೀಡಿ ಮಧ್ಯಂತರ ಆದೇಶ ನೀಡಿರುವುದು ಸ್ವಾಗತಾರ್ಹ. ಆದರೆ ಸಂಸತ್ ರೂಪಿಸಿದ ಕಾನೂನು ತಡೆಯುವ ಶಕ್ತಿ ನ್ಯಾಯಾಲಯಕ್ಕಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರ ಹೋರಾಟದ ಅಂಶಗಳನ್ನು ಉಲ್ಲೇಖಿಸಿ ಕೋರ್ಟ್ ತಡೆ ನೀಡಿದೆ. ಯಾವ ಅಂಶಗಳು ರೈತ ವಿರೋಧಿಯಾಗಿವೆ? ಕಾಯ್ದೆಗಳಲ್ಲಿ ಸಂವಿಧಾನ ವಿರೋಧಿ ಅಂಶಗಳಿಲ್ಲ ಎನ್ನುವುದನ್ನು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡುತ್ತೇವೆ. ರೈತರಿಗೆ ಹಾಕಿದ್ದ ಬೇಡಿಯನ್ನು ಹೊಸ ಕಾಯ್ದೆಗಳ ಮೂಲಕ ತೆಗೆಯಲು ಪ್ರಧಾನಿ ನಿರ್ಧರಿಸಿದ್ದಾರೆ. ಸುಧಾರಣೆ ತಡೆಯಲು ಕೆಲವರು ಬಯಸಿದ್ದಾರೆ. ಅವರ ಪ್ರಯತ್ನಗಳಿಗೆ ಯಶಸ್ಸು ಸಿಗುವುದಿಲ್ಲ ಎಂದು ತಿಳಿಸಿದರು.
PublicNext
13/01/2021 08:16 pm