ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಡಿಕೆ ಸಹೋದರರಿಂದ ಕನಕಪುರ ತಹಶೀಲ್ದಾರ್‌ಗೆ ಕಿರುಕುಳ?

ಕನಕಪುರ: ತಾಲೂಕಿನಲ್ಲಿ ಉತ್ತಮ ಕೆಲಸ ಮಾಡುತ್ತಿರುವ ತಹಶೀಲ್ದಾರ್ ವರ್ಷಾ ಒಡೆಯರ್‌ ಅವರಿಗೆ ತಮ್ಮ ಚೇಲಾಗಳ ಮೂಲಕ ಕಿರುಕುಳ ನೀಡುವುದನ್ನು ನಿಲ್ಲಿಸಬೇಕು ಎಂದು ಮೇಕೆದಾಟು ಹೋರಾಟ ಸಮಿತಿಯ ಅಧ್ಯಕ್ಷ ಮಲ್ಲಪ್ಪ ಆಗ್ರಹಿಸಿದ್ದಾರೆ.

ಕನಕಪುರದ ತಾಲೂಕು ಕಚೇರಿ ಮುಂಭಾಗದಲ್ಲಿ ಮಂಗಳವಾರ ಆಯೋಜಿಸಿದ್ದ 'ವರ್ಷಾ ಒಡೆಯರ್‌ಗೆ ನೈತಿಕ ಬೆಂಬಲ ಘೋಷಿಸಿ' ನಡೆಸಿದ ಬೈಕ್ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕಳೆದ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದ ಫಲಿತಾಂಶದಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಸಂಸದ ಡಿ.ಕೆ.ಸುರೇಶ್ ಸಹೋದರರು ಪಾಠ ಕಲಿತುಕೊಳ್ಳಬೇಕು. ಈ ಹಿಂದಿನ ತಹಶೀಲ್ದಾರ್‌ಗಳು ಮಾಡುತ್ತಿದ್ದಂತೆ ತಾವು ಹಾಕಿದ ತಾಳಕ್ಕೆ ತಕ್ಕಂತೆ ಕುಣಿಯುತ್ತಿಲ್ಲ ಎಂಬ ಏಕೈಕ ಕಾರಣಕ್ಕಾಗಿ ಹೆಣ್ಣು ಮಗಳ ಕಣ್ಣಲ್ಲಿ ನೀರು ಹಾಕಿಸುತ್ತಿದ್ದಾರೆ ಎಂದು ದೂರಿದರು.

ತಹಸೀಲ್ದಾರ್‌ಗೆ ಕಾನೂನು ಪ್ರಕಾರ ಕೆಲಸ ಮಾಡಲು ಬಿಡುತ್ತಿಲ್ಲ. ಇದೇ ಪ್ರವೃತ್ತಿಯನ್ನು ಮುಂದುವರಿಸಿದರೆ ಬಡಪಾಯಿ ಹೆಣ್ಣು ಮಗಳ ಶಾಪ ನಿಮಗೆ ತಟ್ಟದೇ ಬಿಡುವುದಿಲ್ಲ ಎಂದು ಹೇಳಿದರು.

Edited By : Vijay Kumar
PublicNext

PublicNext

13/01/2021 08:30 pm

Cinque Terre

44.53 K

Cinque Terre

10

ಸಂಬಂಧಿತ ಸುದ್ದಿ