ಬೆಂಗಳೂರು: ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಸಂಪುಟ ವಿಸ್ತರಣೆಗೆ ಅನುಕೂಲ ಮಾಡಿಕೊಂಡಿದ್ದ ಎಚ್.ನಾಗೇಶ್ ಅವರಿಗೆ ಸಿಎಂ ಯಡಿಯೂರಪ್ಪ ಅವರು ಕೊಟ್ಟ ಮಾತಿನಂತೆ ಅಂಬೇಡ್ಕರ್ ಅಭಿವೃದ್ಧಿ ನಿಗಮ ಅಧ್ಯಕ್ಷ ಸ್ಥಾನ ಕೊಟ್ಟಿದ್ದಾರೆ.
ಸಿಎಂ ಯಡಿಯೂರಪ್ಪ ಅವರ ಮಾತಿನಂತೆ ನಾಗೇಶ್ ಇಂದು ಬೆಳಗ್ಗೆ ತನ್ನ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇತ್ತ ನಾಗೇಶ್ ಅವರು ಅಂಬೇಡ್ಕರ್ ಅಭಿವೃದ್ಧಿ ನಿಗಮ ಅಧ್ಯಕ್ಷ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದರು. ಅದರಂತೆ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಯಡಿಯೂರಪ್ಪ ಅವರು ನಾಗೇಶ್ ಅವರನ್ನು ಅಂಬೇಡ್ಕರ್ ಅಭಿವೃದ್ಧಿ ನಿಗಮ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ನೀಡಿದ್ದಾರೆ.
ಸಿ. ಮುನಿಕೃಷ್ಣ ಅವರು ಈ ಹಿಂದೆ ಅಂಬೇಡ್ಕರ್ ಅಭಿವೃದ್ಧಿ ನಿಗಮ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು. ಅವರನ್ನು ಮಾರುಕಟ್ಟೆ ಸಂವಹನ, ಜಾಹೀರಾತು ಲಿಮಿಟೆಡ್ ಹುದ್ದೆ ನೀಡಲಾಗಿದೆ.
PublicNext
13/01/2021 09:58 pm