ಬೆಂಗಳೂರು: ನಾಡಿನೆಲ್ಲೆಡೆ ಇವತ್ತು ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಗೋಪೂಜೆ ಮಾಡುವ ಮೂಲಕ ಹಬ್ಬ ಆಚರಿಸಿದರು. ಅಲ್ಲದೇ ನಾಡಿನ ಜನತೆಗೆ ಸಂಕ್ರಾಂತಿ ಶುಭಾಶಯ ಕೋರಿದರು. ಗುರುವಾರ ಸಂಕ್ರಾಂತಿ ಪ್ರಯುಕ್ತ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಬಿಎಸ್ ಯಡಿಯೂರಪ್ಪ ಗೋಪೂಜೆ ನೆರವೇರಿಸಿದರು. ಸದ್ಯದ ರಾಜಕೀಯ ಜಂಜಾಟಗಳ ನಡುವೆಯೂ ಸಿಎಂ ಸಂಕ್ರಾಂತಿ ಹಬ್ಬ ಆಚರಿಸಿದ್ದು ಈ ಬಾರಿಯ ವಿಶೇಷ. ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಾ:ಸಿ.ಎನ್.ಅಶ್ವತ್ಥ್ ನಾರಾಯಣ್ ಉಪಸ್ಥಿತರಿದ್ದರು.
ಸುಗ್ಗಿಕಾಲ ಸಂಕ್ರಾಂತಿಗೆ, ನಾಡಿನ ರೈತರ ಜೀವನದಲ್ಲಿ ವಿಶಿಷ್ಟವಾದ ಸ್ಥಾನವಿದೆ. ರೈತರ ಬಾಳಿನಲ್ಲಿ ಸುಗ್ಗಿ ಸದಾ ಇರಬೇಕು ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳನ್ನು ಜಾರಿಗೆ ತಂದಿವೆ. ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಮುನ್ನಡೆಯುತ್ತಿದೆ ಎಂದು ಸಂಕ್ರಾಂತಿ ಶುಭಾಶಯವನ್ನು ಬಿಎಸ್‌ವೈ ಕೋರಿದ್ದಾರೆ.
PublicNext
14/01/2021 11:02 am