ದಾವಣಗೆರೆ: ಅತೃಪ್ತರು ಸೀದಾ ಹೋಗಿ ಪಕ್ಷದ ವರಿಷ್ಠರಿಗೆ ದೂರು ನೀಡಲಿ ಅದಕ್ಕೆ ನನ್ನದೇನೂ ತಕರಾರಿಲ್ಲ. ನನ್ನ ವ್ಯಾಪ್ತಿಯಲ್ಲಿ ಸಂಪುಟ ವಿಸ್ತರಣೆ ಮಾಡಿದ್ದೇನೆ. ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಹರಿಹರ ತಾಲೂಕಿನ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದಲ್ಲಿ ಎರಡು ದಿನ ನಡೆಯಲಿರುವ ಹರ ಜಾತ್ರೆ ಉದ್ಘಾಟಿಸಲು ಬಂದಾಗ ದಾವಣಗೆರೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಯಡಿಯೂರಪ್ಪ, ಹೈಕಮಾಂಡ್ ನಾಯಕರ ಜತೆ ಚರ್ಚಿಸಿಯೇ ಸಂಪುಟ ವಿಸ್ತರಣೆ ಮಾಡಲಾಗಿದೆ. ಇನ್ನು, ಸಂಪುಟ ವಿಸ್ತರಣೆಯಿಂದ 10 ರಿಂದ 12 ಜನ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಲ್ಲದ ಸಲ್ಲದ ಹೇಳಿಕೆ ಕೊಟ್ಟು ಪಕ್ಷದ ವರ್ಚಸ್ಸಿಗೆ ಧಕ್ಕೆ ತರಬೇಡಿ ಎಂದು ಹೇಳಿದರು.
PublicNext
14/01/2021 01:51 pm