ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಿಎಸ್‌ವೈ ನಾಮಕಾವಸ್ತೆ ಮುಖ್ಯಮಂತ್ರಿ: ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಕುಟುಂಬ ರಾಜಕಾರಣದ ಬಗ್ಗೆ ಬಿಜೆಪಿ ನಾಯಕರಿಗೆ ತಡವಾಗಿ ಜ್ಞಾನೋದಯವಾಗಿದೆ. ಯಡಿಯೂರಪ್ಪ ನಾಮಕಾವಸ್ತೆ ಸಿಎಂ ನಿಜವಾದ ಅಧಿಕಾರ ಚಲಾಯಿಸುತ್ತಿರುವುದು ಅವರ ಮಗ ಎಂದು ನಾನು ಬಹಳ ಹಿಂದೆಯೇ ಹೇಳಿದ್ದೆ. ಕೆಲವರಿಗೆ ಈಗೀಗ ಸತ್ಯ ಗೊತ್ತಾಗ್ತಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಸರಣಿ ಟ್ವೀಟ್ ಮಾಡಿರುವ ಅವರು, ಸಿಎಂ ಯಡಿಯೂರಪ್ಪ ಅವರ ಕುರ್ಚಿ ಗಟ್ಟಿಯಾಗಿದ್ದರೆ ಸಂಪುಟ ವಿಸ್ತರಣೆಗಾಗಿ ಹೈಕಮಾಂಡ್ ಬಳಿ ಗೋಗರೆಯುವ, ಕೈಕಾಲು ಹಿಡಿಯುವ ಅಗತ್ಯವಿರುತ್ತಿರಲಿಲ್ಲ. ಕೆಲವರಿಗೆ ಮಂತ್ರಿ ಸ್ಥಾನ ಕೊಡಲು ಕಾನೂನಿನ ತೊಡಕಿದೆ ಅಂತ ಗೊತ್ತಿದ್ರೂ ಸುಳ್ಳು ವಾಗ್ದಾನ ನೀಡಿ ಪಕ್ಷಕ್ಕೆ ಸೇರಿಸಿಕೊಂಡಿದ್ದಾರೆ. ಹಾಗಾಗಿ ಬಿಜೆಪಿ ಸೇರಿದ ಕೆಲವರು ಬಾಯಿ ಬಡ್ಕೊತಿರೋದು ಎಂದು ಟಾಂಗ್ ನೀಡಿದ್ದಾರೆ.

ಸಿಡಿ ತೋರಿಸಿ ಸಿಎಂ ಯಡಿಯೂರಪ್ಪ ಅವರನ್ನು ಬೆದರಿಸಿ, ಕೆಲವರು ಮಂತ್ರಿ ಹುದ್ದೆ ಪಡೆದಿದ್ದಾರೆ ಎಂದು ಬಿಜೆಪಿ ಶಾಸಕರೇ ಆರೋಪಿಸುತ್ತಿದ್ದಾರೆ. ಬ್ಲ್ಯಾಕ್‌ಮೇಲ್ ಮಾಡಿದವರು ಯಾರೇ ಆಗಿರಲಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವ ಧೈರ್ಯ ಮುಖ್ಯಮಂತ್ರಿಗಳಿಗಿದೆಯೇ ಎಂದು ಪ್ರಶ್ನಿಸಿ ಸವಾಲ್ ಹಾಕಿದ್ದಾರೆ.

Edited By : Vijay Kumar
PublicNext

PublicNext

14/01/2021 05:07 pm

Cinque Terre

65.39 K

Cinque Terre

5