ಬೆಂಗಳೂರು: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಿಡಿಸಿದ ಸಿಎಂ ಯಡಿಯೂರಪ್ಪ ಸಿಡಿ ಬಾಂಬ್ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಇತ್ತ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ತನಿಖೆಗೆ ಆಗ್ರಹಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬ್ಲಾಕ್‌ಮೇಲ್ ಮಾಡಿದವರು ಮತ್ತು ಭ್ರಷ್ಟಾಚಾರಿಗಳು ಸಂಪುಟ ಸೇರಿದ್ದಾರೆ ಎಂದು ಬಿಜೆಪಿ ನಾಯಕರೇ ಹೇಳಿದ್ದಾರೆ. ಹೀಗಾಗಿ ಹೈಕೋರ್ಟ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ನ್ಯಾಯಮೂರ್ತಿಗಳ ಮೂಲಕ ಈ ಆರೋಪದ ಬಗ್ಗೆ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ.
ಭ್ರಷ್ಟಾಚಾರ ಮತ್ತು ಬ್ಲಾಕ್‌ಮೇಲ್ ಆರೋಪ ಗಂಭೀರವಾಗಿದೆ. ಬಿಜೆಪಿಯವರೇ ಹೇಳಿದ ಕಾರಣ ಇದು ಐಪಿಸಿ ಅಪರಾಧದ ಅಡಿ ಸೇರಿಕೊಳ್ಳುತ್ತದೆ. ಯಾಕೆ ಸಿಸಿಬಿ ಪ್ರಕರಣ ದಾಖಲಿಸುತ್ತಿಲ್ಲ? ಸಿಬಿಐ, ಇಡಿ, ಐಟಿ ಈಗ ಎಲ್ಲಿದೆ? ಗಂಭೀರ ಆರೋಪದ ಹಿನ್ನೆಲೆಯಲ್ಲಿ ನ್ಯಾಯಾಂಗ ತನಿಖೆ ಆಗಬೇಕು ಎಂದು ಡಿಕೆಶಿ ಒತ್ತಾಯಿಸಿದ್ದಾರೆ.
PublicNext
14/01/2021 07:17 pm