ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಿಎಸ್‍ವೈ ಕುಟುಂಬ ರಾಜಕಾರಣಕ್ಕೆ ಯತ್ನಾಳ್ ಗರಂ

ಬಾಗಲಕೋಟೆ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕುಟುಂಬ ರಾಜಕಾರಣ ಮಾಡುತ್ತಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ.

ಕೂಡಲಸಂಗಮದಲ್ಲಿ ಇಂದು ಮಾತನಾಡಿದ ಅವರು, ಕುಟುಂಬ ರಾಜಕಾರಣ ಅಂತ್ಯ ಮಾಡಬೇಕೆಂದು ಪ್ರಧಾನಿ ಮೋದಿ ಪರದಾಡುತ್ತಿದ್ದಾರೆ. ಆದರೆ ಬಿಜೆಪಿಯಲ್ಲಿ ಸಿಎಂ ಬಿಎಸ್‍ವೈ ಕುಟುಂಬ ರಾಜಕಾರಣ ಮಾಡುತ್ತಿದ್ದಾರೆ. ಅವರ ಮಗ ಸಂಸದ, ಇನ್ನೊಬ್ಬ ಮಗ ಪಕ್ಷದ ಉಪಾಧ್ಯಕ್ಷ, ಮಗಳು ಸಂಘಟನಾ ಅಧ್ಯಕ್ಷೆ, ಮೊಮ್ಮಗನನ್ನು ಕಾರ್ಯದರ್ಶಿ ಮಾಡಿದ್ದಾರೆ. ಆಳಿಯನನ್ನು ನಿಗಮದ ಅಧ್ಯಕ್ಷ ಮಾಡಿದ್ದಾರೆ. ದೇಶದಲ್ಲಿ ಕುಟುಂಬ ರಾಜಕಾರಣ ಮಾಡಿದವರು ಅಂತ್ಯವಾಗಿದ್ದಾರೆ. ಅದೇ ರೀತಿ ನಿಮ್ಮ ಕುಟುಂಬವೂ ಅಂತ್ಯವಾಗ ಬಾರದೆಂದರೆ ನೀವು ಒಬ್ಬರೇ ಹುದ್ದೆಯಲ್ಲಿರಿ. ಇಡೀ ಕಾವೇರಿ ನಿವಾಸವೇ ಬಿಎಸ್‍ವೈ ಕುಟುಂಬದಿಂದ ತುಂಬಿದೆ ಎಂದು ದೂರಿದರು.

ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಗುಡುಗಿದ ಯತ್ನಾಳ್, ಅಸಮಾಧಾನಿತರ ವಿರುದ್ಧ ಗರಂ ಆಗೋಕೆ ಅವರು ಯಾರು? ಅವರು ತಮ್ಮ ತ್ಯಾಗ ಮಾಡಿದ್ದಕ್ಕೆ ಪಕ್ಷ ಅಧಿಕಾರಕ್ಕೆ ಬಂದಿದೆ. ಅದನ್ನು ಸ್ವಾಗತಿಸುತ್ತೇನೆ. ಆದರೆ ಯಾವ ಶಾಸಕರೂ ಮಾತನಾಡಬಾರದೆಂದು ಅವರ ಬಾಯಿಗೆ ಕೀಲಿ ಹಾಕೋಕೆ ಸಾಧ್ಯವಿಲ್ಲ ಎಂದರು.

Edited By : Vijay Kumar
PublicNext

PublicNext

14/01/2021 08:06 pm

Cinque Terre

73.89 K

Cinque Terre

6

ಸಂಬಂಧಿತ ಸುದ್ದಿ