ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹರಿಹರ ಪಂಚಮಸಾಲಿ ಮಠಕ್ಕೆ ₹10 ಕೋಟಿ ಅನುದಾನ: ಸಿಎಂ ಯಡಿಯೂರಪ್ಪ

ದಾವಣಗೆರೆ: ಜಿಲ್ಲೆಯ ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಮಠದ ಅಭಿವೃದ್ಧಿಗಾಗಿ ₹ 10 ಕೋಟಿ ಅನುದಾನ ಬಿಡುಗಡೆ ಮಾಡಿದ್ದೇನೆ. ನಾಲ್ಕೈದು ದಿನಗಳಲ್ಲಿ ಮಠದ ಖಾತೆಗೆ ಹಣ ವರ್ಗಾವಣೆಯಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ತಿಳಿಸಿದರು.

ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದಲ್ಲಿ ಗುರುವಾರ ನಡೆದ ಹರಜಾತ್ರಾ ಮಹೋತ್ಸವದ ಸ್ವಾವಲಂಬಿ ಸಮಾವೇಶದಲ್ಲಿ ಸಂಕ್ರಾಂತಿ ಸಂಭ್ರಮವನ್ನು ಉದ್ಘಾಟಿಸಿದ ಯಡಿಯೂರಪ್ಪ ಮಾತನಾಡಿದರು. ಪೀಠದಲ್ಲಿ ವಿವಿಧ ಕೆಲಸ, ಕಾಮಗಾರಿಗಳನ್ನು ನಡೆಸಲು ಸ್ವಾಮೀಜಿ ಮತ್ತು ಸಮಿತಿ ಸದಸ್ಯರು ಅನುದಾನ ನೀಡುವಂತೆ ಸರ್ಕಾರಕ್ಕೆ ಬೇಡಿಕೆ ಸಲ್ಲಿಸಿದ್ದರು. ಈಗ ಹಣ ಮಂಜೂರಾಗಿದೆ. ಅದನ್ನು ಅಭಿವೃದ್ಧಿ ಕಾರ್ಯಕ್ಕೆ ಸದುಪಯೋಗ ಮಾಡಿಕೊಳ್ಳಬೇಕು ಎಂದರು.

Edited By : Nagaraj Tulugeri
PublicNext

PublicNext

15/01/2021 08:15 am

Cinque Terre

97.72 K

Cinque Terre

8

ಸಂಬಂಧಿತ ಸುದ್ದಿ