ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡದ ಭೀಕರ ಅಪಘಾತ: ಮೃತರಿಗೆ ಮೋದಿ ಸಂತಾಪ

ನವದೆಹಲಿ: ಧಾರವಾಡ ಸಮೀಪದ ತಡಸಿನಕೊಪ್ಪ ಕ್ರಾಸ್ ಬಳಿ ಇಂದು ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತಕ್ಕೆ ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲೇ ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಕನ್ನಡದಲ್ಲಿ ಟ್ವೀಟ್ ಮಾಡಿರುವ ಅವರು, ''ಕರ್ನಾಟಕದ ಧಾರವಾಡ ಜಿಲ್ಲೆಯಲ್ಲಿ ಇಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತರಾದವರಿಗೆ ಸಂತಾಪ ಸೂಚಿಸುವೆ. ಈ ಸಂದರ್ಭದಲ್ಲಿ ದುಃಖತಪ್ತ ಕುಟುಂಬಗಳ ನೋವಿನಲ್ಲಿ ನಾನು ಕೂಡ ಭಾಗಿಯಾಗಿರುತ್ತೇನೆ. ಅಪಘಾತದಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸುವೆ'' ಎಂದು ತಿಳಿಸಿದ್ದಾರೆ.

Edited By : Vijay Kumar
PublicNext

PublicNext

15/01/2021 02:46 pm

Cinque Terre

84.22 K

Cinque Terre

1

ಸಂಬಂಧಿತ ಸುದ್ದಿ