ನವದೆಹಲಿ: ರೈತರನ್ನು ಮುಗಿಸಲೆಂದೇ ಕೇಂದ್ರ ಸರ್ಕಾರವು ಕೃಷಿ ಕಾಯ್ದೆ ಜಾರಿಯಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ.
ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ಜಾರಿ ವಿರುದ್ಧ ರೈತರು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ಸೂಚಿಸಿರುವ ಕಾಂಗ್ರೆಸ್ ಪಕ್ಷವು ಶುಕ್ರವಾರ 'ಕಿಸಾನ್ ಅಧಿಕಾರ್ ದಿವಸ್' ಆಚರಿಸುತ್ತಿದೆ. ಧರಣಿ ಮುನ್ನಡೆಸುತ್ತಿರುವ ರಾಹುಲ್ ಗಾಂಧಿ, ಬಿಜೆಪಿ ಆಡಳಿತದ ಕೇಂದ್ರ ಸರ್ಕಾರವು ವಿವಾದಿತ ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳಲೇಬೇಕು. ಅಲ್ಲಿಯವರೆಗೆ ಕಾಂಗ್ರೆಸ್ ಪಟ್ಟು ಸಡಿಲಿಸುವುದಿಲ್ಲ ಎಂದು ಒತ್ತಾಯಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಈ ಹಿಂದೆ ರೈತರ ಭೂಮಿಯನ್ನು ಕಸಿದುಕೊಳ್ಳಲು ಪ್ರಯತ್ನಿಸಿತ್ತು. ಭೂಸ್ವಾಧೀನ ಕಾಯ್ದೆ ಬಂದಾಗ ಕಾಂಗ್ರೆಸ್ ಪಕ್ಷವು ತಡೆ ಹಿಡಿದಿತ್ತು. ಈಗ ಬಿಜೆಪಿ ಮತ್ತು ಅವರ ಇಬ್ಬರು ಸ್ನೇಹಿತರು ಸೇರಿ ರೈತರ ಮೇಲೆ ಹಲ್ಲೆ ನಡೆಸುತ್ತಿದ್ದು, ಮೂರು ಕೃಷಿ ಕಾನೂನುಗಳನ್ನು ಜಾರಿಗೆ ತಂದಿದ್ದಾರೆ ಎಂದು ದೂರಿದರು.
PublicNext
15/01/2021 05:45 pm