ನವದೆಹಲಿ: ಪ್ರತಿಭಟನಾ ನಿರತ ರೈತ ಮುಖಂಡರೊಂದಿಗೆ ನಡೆದ ಕೇಂದ್ರದ ಒಂಬತ್ತನೇ ಸುತ್ತಿನ ಮಾತುಕತೆ ಕೂಡ ವಿಫಲವಾಗಿದೆ. ಇಂದು ನಡೆದ ಸಭೆಯಲ್ಲಿ ಯಾವುದೇ ಒಪ್ಪಂದದ ಮಾತುಕತೆಗಳು ನಡೆದಿಲ್ಲ.
ದೆಹಲಿ ವಿಜ್ಞಾನ ಭವನದಲ್ಲಿ 5 ತಾಸು ನಡೆದ ಸಭೆಯಲ್ಲಿ 41 ರೈತ ಸಂಘಟನೆಗಳ ಪ್ರತಿನಿಧಿಗಳು, ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಮತ್ತು ಸಚಿವಾಲಯದ ಅಧಿಕಾರಿಗಳು ಇದ್ದರು.
ಈ ಕುರಿತು ಮಾತನಾಡಿರುವ ರೈತ ಮುಖಂಡ ಡಾ.ದರ್ಶನ್ಪಾಲ್, ''ಸಭೆ ಶೇ.120ರಷ್ಟು ವಿಫಲವಾಗಿದೆ. ಅಗತ್ಯ ಸರಕುಗಳ ಕಾಯ್ದೆಯನ್ನು ಸಂಪೂರ್ಣವಾಗಿ ತೆಗೆದುಹಾಕುವಂತೆ ನಾವು ಸರ್ಕಾರಕ್ಕೆ ಸಲಹೆ ನೀಡಿದ್ದೇವು. ಆದರೆ ಈ ಬಗ್ಗೆ ಕೃಷಿ ಸಚಿವರು ಏನನ್ನು ಹೇಳಲಿಲ್ಲ'' ಎಂದು ಹೇಳಿದ್ದಾರೆ.
ಮುಂದಿನ ಸುತ್ತಿನ ಮಾತುಕತೆ ಜನವರಿ 19ರಂದು ನಿಗದಿಯಾಗಿದೆ. ಇನ್ನು ಕೃಷಿ ಕಾಯ್ದೆಗೆ ಸುಪ್ರೀಂ ಕೋರ್ಟ್ ತಡೆ ನೀಡಿ ಸಮಿತಿ ರಚಿಸಿದೆ. ಈ ಸಮಿತಿಯೂ ಬಿಕ್ಕಟ್ಟನ್ನು ಅಂತ್ಯಗೊಳಿಸಲು ಮಧ್ಯಸ್ಥಗಾರರೊಂದಿಗೆ ಸಮಾಲೋಚನೆ ನಡೆಸಲಿದೆ. ಸರ್ಕಾರದ ಮೇಲೆ ಒತ್ತಡ ಹಾಕಲು ಮುಂದಾಗಿರುವ ರೈತರು ಜ. 26ರ ಗಣರಾಜ್ಯೋತ್ಸವದಂದು ಟ್ರ್ಯಾಕ್ಟರ್ ಮೆರವಣಿಗೆ ನಡೆಸಲು ನಿರ್ಧರಿಸಿದ್ದಾರೆ. ಅದರಂತೆ ರೈತರ ಉದ್ದೇಶಿತ ಟ್ರ್ಯಾಕ್ಟರ್ ಮೆರಣಿಗೆ ನಡೆಯಲಿದೆ ಎಂದು ತಿಳಿಸಿದರು.
PublicNext
15/01/2021 10:25 pm