ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಶನಿವಾರ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದೆ. ಸರ್ಕಾರ ಹಾಗೂ ಪಕ್ಷದಲ್ಲಿನ ಎಲ್ಲಾ ಅಸಮಾಧಾನಕ್ಕೆ ಪರಿಹಾರ ಅಮಿತ್ ಶಾ ಪರಿಹಾರ ನೀಡಲಿದ್ದಾರೆ ಎಂಬ ನಿರೀಕ್ಷೆ ಕಾರ್ಯಕರ್ತರ ವಲಯದಲ್ಲಿದೆ.
ನಾಳೆ ರವಿವಾರ ಬೆಳಗಾವಿಯಲ್ಲಿ ಬೃಹತ್ ಸಮಾವೇಶದಲ್ಲಿ ಭಾಗವಹಿಸಲಿರುವ ಅಮಿತ್ ಶಾ ಎರಡು ದಿನ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಭದ್ರಾವತಿ, ಬೆಳಗಾವಿ ಮತ್ತು ಬೆಂಗಳೂರಿನ ವಿಧಾನಸೌಧದಲ್ಲಿ ಆಯೋಜಿಸಿರುವ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಈ ನಡುವೆ ಪಕ್ಷದ ಸಂಘಟನೆಗೆ, ರಾಜ್ಯ ರಾಜಕೀಯದ ಬಗ್ಗೆ ಗಮನ ಹರಿಸಲಿದ್ದಾರೆ. ಅಲ್ಲದೆ, ಮುಂಬರಲಿರುವ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ಬಗ್ಗೆಯೂ ಚರ್ಚೆ ನಡೆಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
ಅಮಿತ್ ಶಾ ಭೇಟಿ ನಡುವೆ ನಾಳೆ ಸಂಜೆ 7.30ಕ್ಕೆ ನಗರದ ಖಾಸಗಿ ಹೋಟೆಲ್ನಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ಆಯೋಜಿಸಲಾಗಿದೆ.
PublicNext
16/01/2021 09:17 am