ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಇಂಡೋನೇಷ್ಯಾದಲ್ಲಿ ಭೀಕರ ಭೂಕಂಪ: 42 ಸಾವು: 600ಕ್ಕೂ ಹೆಚ್ಚು ಮಂದಿಗೆ ಗಾಯ

ಜಕಾರ್ತ: ಇಂಡೋನೇಷ್ಯಾದ ಸುಲವೇಸಿ ದ್ವೀಪದಲ್ಲಿ ಭೀಕರ ಭೂಕಂಪ ಸಂಭವಿಸಿದೆ. ಭೂಕಂಪದ ಕರಾಳತೆಗೆ ಬರೋಬ್ಬರಿ 42 ಮಂದಿ ಮೃತಪಟ್ಟಿದ್ದಾರೆ. 600ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಶುಕ್ರವಾರ ಬೆಳಗ್ಗೆ ಭೂಕಂಪನ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 6.2 ತೀವ್ರತೆಯ ಕಂಪನ ದಾಖಲಾಗಿದೆ. ಭಾರೀ ಪ್ರಮಾಣದ ಭೂಕಂಪನದಿಂದ ಆಸ್ಪತ್ರೆ, ಕಟ್ಟಡಗಳು ಕುಸಿದು ಬಿದ್ದ ಪರಿಣಾಮ ನೂರಾರು ಮಂದಿ ಅವಶೇಷಗಳಡಿ ಸಿಲುಕುವಂತಾಯಿತು.

ಸದ್ಯ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಭೂಕಂಪದಿಂದ ಆಸ್ಪತ್ರೆ ಕಟ್ಟಡ ಕುಸಿದು ಬಿದ್ದಿದ್ದರಿಂದ ರೋಗಿಗಳು, ವೈದ್ಯರುಗಳು ಕೂಡ ಅವಶೇಷಗಳಡಿ ಸಿಲುಕಿ ನರಳಾಡುವಂತಾಗಿತ್ತು. ಘಟನೆಯಲ್ಲಿ ಹಲವರ ಪ್ರಾಣ ಪಕ್ಷಿ ಹಾರಿ ಹೋದರೆ, ಇನ್ನು ಹಲವರು ಅವಶೇಷಗಳಡಿ ಸಿಲುಕಿ ಜೀವಕ್ಕಾಗಿ ಒದ್ದಾಡುತ್ತಿರುವ ದೃಶ್ಯ ಕೂಡ ಕಂಡು ಬಂತು. ಆಗಿರುವ ನಷ್ಟದ ಬಗ್ಗೆ ಅಲ್ಲಿನ ರಕ್ಷಣಾ ಪಡೆಗಳು ಇನ್ನಷ್ಟೆ ಮಾಹಿತಿ ನೀಡಬೇಕಿದೆ.

ಬದುಕುಳಿದ ಗಾಯಾಳುಗಳಿಗೆ ಚಿಕಿತ್ಸೆ ನೀಡಲು ಅಲ್ಲಲ್ಲಿ ವೈದ್ಯಕೀಯ ಶಿಬಿರಗಳನ್ನು ಹಾಕಲಾಗಿದೆ. ಇದ್ದಕ್ಕಿದ್ದಂತೆ ಆಸ್ಪತ್ರೆ ಅಲುಗಾಡಿದಂತಾಗಿದೆ. ನೋಡ ನೋಡುತ್ತಿದ್ದಂತೆ ಒಂದು ಭಾಗ ಕುಸಿದು ಬಿದ್ದಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಭೂಕಂಪದ ಸಂಬಂಧ ಫೋಟೊಗಳು, ವಿಡಿಯೋಗಳು ಹರಿದಾಡುತ್ತಿವೆ. 2021ರ ಆರಂಭದಲ್ಲೇ ಅವಘಡ ಸಂಭವಿಸಿದೆ ಎಂದು ನೆಟ್ಟಿಗರು ಮಾತನಾಡಿಕೊಳ್ಳುತ್ತಿದ್ದಾರೆ.

Edited By : Nagaraj Tulugeri
PublicNext

PublicNext

16/01/2021 10:24 am

Cinque Terre

87.69 K

Cinque Terre

2

ಸಂಬಂಧಿತ ಸುದ್ದಿ