ಬೆಂಗಳೂರು : ಎರಡು ದಿನಗಳ ರಾಜ್ಯ ಪ್ರವಾಸ ಕೈಗೊಂಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಇಂದು ಬೆಂಗಳೂರಿನ ಹೆಚ್ ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.
ರಾಜ್ಯಕ್ಕೆ ಆಗಮಿಸಿದ ಶಾ ಅವರನ್ನು ಸಿಎಂ ಯಡಿಯೂರಪ್ಪ ಅವರು ಗುಲಾಬಿ ನೀಡಿ ಆತ್ಮೀಯವಾಗಿ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಡಿ.ವಿ.ಸದಾನಂದ ಗೌಡ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ರಾಜ್ಯ ಬಿಜೆಪಿ ಸಹ ಉಸ್ತುವಾರಿ ಡಿ.ಕೆ. ಅರುಣಾ, ಸಚಿವ ಸುರೇಶ್ ಕುಮಾರ್, ವಿ. ಸೋಮಣ್ಣ, ಅರವಿಂದ ಲಿಂಬಾವಳಿ, ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
PublicNext
16/01/2021 03:00 pm