ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಮಿತ್ ಶಾ ನೇತೃತ್ವದಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ಶುರು

ಬೆಂಗಳೂರು: ರಾಜ್ಯ ಪ್ರವಾಸದಲ್ಲಿರುವ ಕೇಂದ್ರ ಗೃಹಸಚಿವ ಅಮಿತ್ ಶಾ ನೇತೃತ್ವದಲ್ಲಿ ನಗರದ ವಿಂಡ್ಸರ್ ಮ್ಯಾನರ್ ಹೋಟೆಲ್ ನಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ಆರಂಭಗೊಂಡಿದೆ.

ಕೋರ್ ಕಮಿಟಿ ಸಭೆಯಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಡಿ.ವಿ.ಸದಾನಂದಗೌಡ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಗೃಹ ಸಚಿವ ಬೊಮ್ಮಾಯಿ, ಸಚಿವರಾದ ಜಗದೀಶ್ ಶೆಟ್ಟರ್, ಆರ್.ಅಶೋಕ್, ಅರವಿಂದ ಲಿಂಬಾವಳಿ, ರಾಜ್ಯ ಬಿಜೆಪಿ ಸಂಘಟನಾ ಕಾರ್ಯದರ್ಶಿ ಅರುಣ್ ಕುಮಾರ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಅಕಾರ್ಯದರ್ಶಿ ಸಿ.ಟಿ.ರವಿ ಭಾಗಿಯಾಗಿದ್ದಾರೆ.

ಇನ್ನು, ಹೋಟೆಲ್ ನಲ್ಲಿರುವ ಅಮಿತ್ ಶಾ ಅವರನ್ನು ಭೇಟಿ ಆಗಲು ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ್ ತೆರಳಿದ್ದರು. ಭೇಟಿ ಸಾಧ್ಯವಾಗದ ಕಾರಣ ಹೋಟೆಲ್ ನಿಂದ ಹೊರ ನಡೆದಿದ್ದಾರೆ.

Edited By : Nirmala Aralikatti
PublicNext

PublicNext

16/01/2021 09:51 pm

Cinque Terre

91.79 K

Cinque Terre

0

ಸಂಬಂಧಿತ ಸುದ್ದಿ