ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಿ ಎಸ್ ವೈ ಕಾರ್ಯವೈಖರಿಗೆ ಭೇಷ್ ಎಂದ ಶಾ : ರಾಜ್ಯಕ್ಕೆ ಸೂಕ್ತ ನೆರವು ನೀಡುವ ಭರವಸೆ

ಬೆಂಗಳೂರು: ರಾಜ್ಯದ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಿಎಂ ಯಡಿಯೂರಪ್ಪ ಕಾರ್ಯವೈಕರಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಬಿಎಸ್ ವೈ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ರಾಜ್ಯಕ್ಕೆ ಅಗತ್ಯ ಇರುವ ನೆರವು ನೀಡಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಬದ್ಧವಾಗಿದೆ ಎಂದು ಅಮಿತ್ ಶಾ ಮೆಚ್ಚುಗೆಯ ಮಾತುಗಳನ್ನಾಡಿ ಭರವಸೆ ನೀಡಿದ್ದಾರೆ.

ವಿಧಾನಸೌಧದಲ್ಲಿಂದು ನಡೆದ ಪೊಲೀಸ್ ಗೃಹ ಯೋಜನೆ-2020ರಡಿ ನಿರ್ಮಿಸಿರುವ ಪೊಲೀಸ್ ವಸತಿ ಗೃಹ, ಪೊಲೀಸ್ ಗೃಹ ಯೋಜನೆ -2025ರಡಿ 10 ಸಾವಿರಕ್ಕೂ ಹೆಚ್ಚು ವಸತಿ ಗೃಹ ನಿರ್ಮಾಣ ಕಾರ್ಯಕ್ಕೆ ಚಾಲನೆ ಮತ್ತು ವಿಜಯಪುರದಲ್ಲಿನ ಇಂಡಿಯನ್ ರಿಸರ್ವ್ ಬೆಟಾಲಿಯನ್ ನ ಆಡಳಿತ ಕೇಂದ್ರ ಕಚೇರಿಯನ್ನು ವರ್ಚುವಲ್ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಕೇಂದ್ರದಿಂದ ರಾಜ್ಯಕ್ಕೆ ಅಗತ್ಯ ಇರುವ ನೆರವು ನೀಡಲು ತಯಾರಿದೆ ಎಂದರು.

ರಾಜ್ಯದಲ್ಲಿ ಬಿಜೆಪಿ ಸುಭದ್ರ ಬಡವರ, ರೈತರ ಪರವಾಗಿ ಯೋಜನೆಗಳನ್ನು ಜಾರಿಗೊಳಿಸಿ ಕರ್ನಾಟಕ ಸರ್ಕಾರವು ಉತ್ತಮ ಕಾರ್ಯ ನಿರ್ವಹಿಸುತ್ತಿದೆ. ಬಿಜೆಪಿ ಸರ್ಕಾರ ಪತನವಾಗಲಿದೆ ಎಂದು ಕಾಂಗ್ರೆಸ್ಸಿಗರು ಆಧಾರರಹಿತ ಆರೋಪ ಮಾಡುತ್ತಿದ್ದಾರೆ. ಆದರೆ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸುಭದ್ರವಾಗಿದ್ದು, ಮುಂದಿನ ಎರಡೂವರೆ ವರ್ಷ ಬಿಜೆಪಿ ಸರ್ಕಾರ ಆಡಳಿತ ನಡೆಸಲಿದೆ. ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿಯೂ ಬಿಜೆಪಿ ಬಹುಮತದೊಂದಿಗೆ ಜಯಗಳಿಸಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ. ಜನರ ಮಧ್ಯೆ ಇದ್ದು ಆಡಳಿತ ನಡೆಸಲಾಗುತ್ತಿದೆ. ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದಾರೆ. ಅವುಗಳನ್ನು ಮುಂದುವರಿಸಿಕೊಂಡು ಮತ್ತಷ್ಟು ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಪೊಲೀಸ್ ಇಲಾಖೆ ಬಲಿಷ್ಠಗೊಳಿಸಲು ಹಲವು ಯೋಜನೆ ಜಾರಿ ಮಾಡಲಾಗುವುದು. ಉತ್ತಮ ಸೌಲಭ್ಯ ಕಲ್ಪಿಸಲು ಸರ್ಕಾರ ಬದ್ಧವಾಗಿದೆ ಎಂದರು.

Edited By : Nirmala Aralikatti
PublicNext

PublicNext

16/01/2021 11:01 pm

Cinque Terre

73.33 K

Cinque Terre

3

ಸಂಬಂಧಿತ ಸುದ್ದಿ