ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅತೃಪ್ತ ಶಾಸಕರಿಗೆ ಅಮಿತ್ ಶಾ ಕೊಟ್ಟ ಎಚ್ಚರಿಕೆ ಏನು?

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ.ಇತ್ತಿಚೆಗೆ ನಡೆದ ಸಚಿವ ಸಂಪುಟ ವಿಸ್ತರಣೆಯ ಬಳಿಕ ಬಿಜೆಪಿ ಪಾಳಯದಲ್ಲಿ ಭಿನ್ನಮತ ಭುಗಿಲೆದ್ದಿದೆ. ಸಚಿವ ಸ್ಥಾನ ಕೈ ತಪ್ಪಿದ ಅತೃಪ್ತ ಶಾಸಕರು ಗರಂ ಆಗಿದ್ದಾರೆ.

ಈ ಸ್ಥಿತಿಯಲ್ಲಿ ಅತೃಪ್ತ ಶಾಸಕರಿಗೆ ಶಾ ಕಡಕ್ ಎಚ್ಚರಿಕೆ ನೀಡಿದ್ದಾರೆ. ಬಿಜೆಪಿಯಲ್ಲಿನ ಸಚಿವಾಕಾಂಕ್ಷಿಗಳು ಅಶಿಸ್ತು ಮತ್ತು ಸಾರ್ವಜನಿಕವಾಗಿ ಟೀಕೆ ಟಿಪ್ಪಣಿಗಳನ್ನು ಮಾಡುವುದನ್ನು ನಿಲ್ಲಿಸಬೇಕು. ಇಲ್ಲಿ ವ್ಯಕ್ತಿಗಿಂತ ಪಕ್ಷ ಮೊದಲು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದ ಪಕ್ಷದ ನಾಯಕರಿಗೆ ಸ್ಪಷ್ಟ ಸಂದೇಶ ರವಾನೆ ಮಾಡಿದ್ದಾರೆ.

ಎರಡು ದಿನಗಳ ರಾಜ್ಯ ಪ್ರವಾಸದಲ್ಲಿರುವ ಅಮಿತ್ ಶಾ ನಿನ್ನೆ ಬೆಂಗಳೂರಿನಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ನಡೆಸಿ ಮಾತನಾಡಿದರು.

ಸಭೆಯಲ್ಲಿ ಅಮಿತ್ ಶಾ ಅವರು ಯಾವೊಬ್ಬ ನಾಯಕರ ಹೆಸರನ್ನು ಪ್ರಸ್ತಾಪ ಮಾಡದಿದ್ದರೂ ಕೂಡ, ಸಚಿವ ಹುದ್ದೆ ವಂಚಿತರು ಮಾಧ್ಯಮಗಳ ಮುಂದೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ವಿರುದ್ಧ ವೈಯಕ್ತಿಕವಾಗಿ ಟೀಕೆ ಮಾಡುತ್ತಿರುವುದಕ್ಕೆ ಎಚ್ಚರಿಕೆ ನೀಡಿದ್ದಾರೆ ಎಂಬುದು ಸ್ಪಷ್ಟವಾಗುತ್ತದೆ.

Edited By : Nirmala Aralikatti
PublicNext

PublicNext

17/01/2021 07:41 am

Cinque Terre

61.83 K

Cinque Terre

3

ಸಂಬಂಧಿತ ಸುದ್ದಿ