ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಲ್ಲಭಭಾಯಿ ಪಟೇಲ್‌ ನಂತರ ಅಷ್ಟು ಎತ್ತರಕ್ಕೆ ಬೆಳೆದವರು ಶಾ: ಬಿಎಸ್‌ವೈ

ಬಾಗಲಕೋಟೆ: ದೇಶದ ಮೊದಲ ಗೃಹ ಸಚಿವ ಸರ್ದಾರ್ ವಲ್ಲಭಭಾಯಿ ಪಟೇಲ್‌ ನಂತರ ಅಷ್ಟು ಎತ್ತರಕ್ಕೆ ಬೆಳೆದ ಮತ್ತೊಬ್ಬ ಗೃಹ ಸಚಿವ ಅಮಿತ್ ಶಾ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೊಗಳಿದ್ದಾರೆ.

ಬಾದಾಮಿ ತಾಲೂಕಿನ ಕೆರಕಲಮಟ್ಟಿಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು. ಜೊತೆಗೆ ಅಮಿತ್ ಶಾ ಮತ್ತೊಮ್ಮೆ ಕೇಂದ್ರ ಗೃಹ ಸಚಿವರಾಗಬೇಕು ಎಂದು ಪ್ರಾರ್ಥಿಸುತ್ತೇನೆ. ಮುಂದಿನ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ವಿಶ್ವಾಸವಿದೆ. ಈ ಬಗ್ಗೆ ಅಮಿತ್ ಶಾ ಅವರಿಗೆ ನಾನು ಭರವಸೆ ನೀಡುತ್ತೇನೆ ಎಂದು ಹೇಳಿದರು.

ನಮ್ಮ ಸರ್ಕಾರವು ರೈತರಿಗೆ ಎಲ್ಲ ರೀತಿಯ ಸೌಲಭ್ಯಗಳನ್ನು ನೀಡುತ್ತಿದೆ. ರೈತರ ಯೋಗಕ್ಷೇಮಕ್ಕಾಗಿ ಏನೆಲ್ಲಾ ಯೋಜನೆ ರೂಪಿಸಬೇಕೋ ಅದೆಲ್ಲವನ್ನೂ ಪ್ರಧಾನಿ ನರೇಂದ್ರ ಮೋದಿ ಅವರ ಆಶೀರ್ವಾದದಿಂದ ನಾವು ಕೆಲಸ ಮಾಡುತ್ತೇವೆ ಎಂದರು.

Edited By : Vijay Kumar
PublicNext

PublicNext

17/01/2021 04:58 pm

Cinque Terre

110.3 K

Cinque Terre

32

ಸಂಬಂಧಿತ ಸುದ್ದಿ