ಬೆಳಗಾವಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರ್ಕಾರವನ್ನು ಕೊಂಡಾಡಿದ್ದಾರೆ.
ಬೆಳಗಾವಿಯಲ್ಲಿ ನಡೆಯುತ್ತಿರುವ ಬಿಜೆಪಿ ‘ಜನಸೇವಕ ಸಮಾವೇಶ’ ಸಮಾರೋಪದಲ್ಲಿ ಮಾತನಾಡಿದ ಅಮಿತ್ ಶಾ, ''ಕೊರೊನಾ ಸಂದರ್ಭದಲ್ಲಿ ಸಿಎಂ ಯಡಿಯೂರಪ್ಪ ನೇತೃತ್ವದ ಸರ್ಕಾರ ಹಲವು ವರ್ಗದ ಜನರಿಗೆ ನೆರವಾಗಿದೆ. ಕೋವಿಡ್ ಪರಿಸ್ಥಿತಿಯನ್ನು ಸರ್ಕಾರ ಚೆನ್ನಾಗಿ ನಿಭಾಯಿಸಿದೆ. ಕೊಪ್ಪಳದಲ್ಲಿ ಆಟಿಕೆ ಕ್ಲಸ್ಟರ್ ಮಾಡಿರುವುದು ಬಹಳ ಸಂತಸ ತಂದಿದೆ. ಬಿಜೆಪಿ ರಾಜಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಯಡಿಯೂರಪ್ಪ ನೇತೃತ್ವದಲ್ಲಿ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಪಕ್ಷವು ಅಭೂತಪೂರ್ವ ಸಾಧನೆ ಮಾಡಿದೆ'' ಎಂದು ಹೊಗಳಿದ್ದಾರೆ.
ಸೋನಿಯಾ ಮನಮೋಹನ್ ಸಿಂಗ್ ಸರ್ಕಾರ ಕರ್ನಾಟಕಕ್ಕೆ ಏನು ಕೊಟ್ಟಿತ್ತು? ಪಟ್ಟಿ ಬಿಡುಗಡೆ ಮಾಡಲಿ. ಎಷ್ಟು ಅನುದಾನ ನೀಡಿದ್ದಾರೆ. ಉತ್ತರ ಕೊಡಬೇಕಲ್ಲವೇ? ನಮ್ಮ ಸರ್ಕಾರ 2 ಲಕ್ಷ ಕೋಟಿ ರೂ.ಗೂ ಹೆಚ್ಚು ಅನುದಾನವನ್ನು ರಾಜ್ಯಕ್ಕೆ ನೀಡಿದೆ. ಕೇಂದ್ರದಲ್ಲಿ ಪ್ರಧಾನಿ ಮೋದಿ ಇಲ್ಲಿ ಸಿಎಂ ಯಡಿಯೂರಪ್ಪ ಜೋಡಿ ಅಭಿವೃದ್ಧಿಗೆ ಟೊಂಕ ಕಟ್ಟಿ ನಿಂತಿದ್ದಾರೆ ಎಂದು ಹೇಳಿದರು.
PublicNext
17/01/2021 06:06 pm