ಮಂಡ್ಯ : ಲೋಕಸಭಾ ಚುನಾವಣೆಯಲ್ಲಿ ನಾನು ಗೆಲ್ಲುತ್ತೇನೆಂದು ಲಕ್ಷಾಂತರ, ಕೋಟ್ಯಂತರ ರೂಪಾಯಿಯನ್ನ ನನ್ನ ಪರ ಬೆಟ್ಟಿಂಗ್ ಕಟ್ಟಿದ್ದರು. ಎಷ್ಟೋ ಜನ ನನ್ನ ಸೋಲಿನಿಂದ ಮನೆ-ಮಠ ಕಳೆದುಕೊಂಡಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.
ಇದು ನನಗೆ ತುಂಬಾ ನೋವಾಗುತ್ತಿದೆ. ನನ್ನ ವಿರೋಧವಾಗಿ ನಿಂತಿದ್ದವರಿಗೆ ಜಿಲ್ಲೆಯಲ್ಲಿ ಅಷ್ಟು ಜನ ಸಂಪರ್ಕ ಇರಲಿಲ್ಲ. ಕುಮಾರಣ್ಣನವರ ಶಕ್ತಿ ಕುಗ್ಗಿಸಲು ವಿರೋಧಿ ಬಣ ಸೃಷ್ಟಿಯಾದವು. ನಾನು ಸೋತರು ನನಗೆ ಬೇಸರವಾಗಿಲ್ಲ. ನನಗೂ ಚುನಾವಣೆಗೂ ಮೊದಲ ಮಂಡ್ಯ ಕ್ಷೇತ್ರದ ಬಗ್ಗೆ ಅಷ್ಟೊಂದು ಒಡನಾಟ ಇರಲಿಲ್ಲ. ಆದರೂ ಜನ ಇಷ್ಟು ಪ್ರೀತಿ ಕೊಟ್ಟಿದ್ದಾರೆ. ನಾನು ಗೆದ್ದು ದೆಹಲಿಗೆ ಹೋಗಿ ಮೆರೆಯ ಬೇಕಿರಲಿಲ್ಲ. ಆ ವಿಚಾರ ಈಗ ಮಾತನಾಡುವುದು ಬೇಡ ಎಂದು ಹೇಳಿದರು.
PublicNext
17/01/2021 08:48 pm