ಬೆಳಗಾವಿ: ಮೋದಿ-ಶಾ ಹಿಂದೆಯೇ ಇದ್ದಿದ್ದರೆ ಪಾಕಿಸ್ತಾನ ಬೇಕು ಎನ್ನುವವರು ಮಂದಿ ತುಂಡಾಗುತ್ತಿದ್ದರು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದ್ದಾರೆ.
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 'ಜನಸೇವಕ' ಸಮಾವೇಶ ಸಮಾರೋಪದಲ್ಲಿ ಮಾತನಾಡಿದ ಅವರು, ‘ಪ್ರಧಾನಿ ನರೇಂದ್ರ ಮೋದಿ ಮಾಹೂ ಗೃಹ ಸಚಿವ ಅಮಿತ್ ಶಾ ಜೋಡಿ ಹಿಂದೆಯೇ ಇದ್ದಿದ್ದರೆ ಪಾಕಿಸ್ತಾನ ಇರುತ್ತಿತ್ತಾ? ಪಾಕಿಸ್ತಾನ ಬೇಕು ಎನ್ನುವವರ ಮೇಲೆ ಈ ಜೋಡಿ ಸರ್ಜಿಕಲ್ ಸ್ಟ್ರೈಕ್ ಮಾಡುತ್ತಿತ್ತು. ಹೀಗಾಗಿ ದೇಶ ತುಂಡಾಗುತ್ತಲೇ ಇರಲಿಲ್ಲ. ಪಾಕಿಸ್ತಾನ ಬೇಕು ಎನ್ನುವವರು ತುಂಡಾಗುತ್ತಿದ್ದರು’ ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ದಲ್ಲಾಳಿಗಳ ಪರ ಕೆಲಸ ಮಾಡಿತು. ಪ್ರಧಾನಿ ನರೇಂದ್ರ ಮೋದಿ ಪ್ರಧಾನ ಸೇವಕರಾದರೆ ನಾವು ಜನಸೇವಕರಾಗಿದ್ದೇವೆ. ಗ್ರಾಮ ಪಂಚಾಯ್ತಿಗಳ ನೂತನ ಸದಸ್ಯರು ಸರ್ಕಾರದ ಸೌಲಭ್ಯಗಳನ್ನು ಜನರಿಗೆ ತಲುಪಿಸಿ ಸೇವೆ ಮಾಡಬೇಕು. ಕಿಸಾನ್ ಸಮ್ಮಾನ್ ಯೋಜನೆ ಕಾಂಗ್ರೆಸ್ ಸರ್ಕಾರ ಅಥವಾ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಇದ್ದಾಗ ಇತ್ತಾ? ರೈತ ಪರ ಯೋಜನೆಗಳನ್ನು ಕೊಟ್ಟ ಪ್ರಧಾನಿ ಮೋದಿ ರೈತ ವಿರೋಧಿ ಆಗುತ್ತಾರಾ ಎಂದು ಪ್ರಶ್ನಿಸಿದರು.
PublicNext
17/01/2021 10:35 pm