ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗಡಿ ಕ್ಯಾತೆ ತೆಗೆದ ಉದ್ಧವ್ ಠಾಕ್ರೆಗೆ ಬಿಎಸ್‌ವೈ ತಿರುಗೇಟು

ಬೆಂಗಳೂರು: ಗಡಿ ಕ್ಯಾತೆ ತೆಗೆದ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ರಾಜ್ಯದ ಸಿಎಂ ಬಿ.ಎಸ್.ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಿಎಂ, 'ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಮರಾಠಿ ಭಾಷೆ ಮತ್ತು ಸಂಸ್ಕೃತಿ ಪ್ರಧಾನ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುವ ಮಾತನಾಡಿರುವುದು ಅವರ ಉದ್ಧಟತನದ ಪ್ರದರ್ಶನವಾಗಿದೆ. ಇದು ಭಾರತೀಯ ಒಕ್ಕೂಟ ತತ್ವದ ವಿರುದ್ಧವಾದ ನಿಲುವು. ಮಹಾಜನ್ ವರದಿಯೇ ಅಂತಿಮ ಎಂಬುದು ಎಲ್ಲರೂ ಬಲ್ಲ ಸತ್ಯ' ಎಂದು ಹೇಳಿದ್ದಾರೆ.

''ಪ್ರಾದೇಶಿಕತೆ ಪ್ರದರ್ಶನ ಮತ್ತು ಭಾಷಾಂಧತೆಯ ಮಾತುಗಳು ದೇಶದ ಏಕತೆಗೆ ಮಾರಕವಾಗಿವೆ. ಇದನ್ನು ನಾನು ಖಂಡಿಸುತ್ತೇನೆ. ಕರ್ನಾಟಕದಲ್ಲಿ ಮರಾಠಿಗರು ಕನ್ನಡಿಗರೊಂದಿಗೆ ಬೆರೆತಿದ್ದಾರೆ. ಅದೇ ರೀತಿ ಮಹಾರಾಷ್ಟ್ರದ ಗಡಿ ಜಿಲ್ಲೆಗಳಲ್ಲಿರುವ ಕನ್ನಡಿಗರು ಮರಾಠಿಗರೊಂದಿಗೆ ಬೆರೆತಿದ್ದಾರೆ'' ಎಂದು ಟ್ವೀಟ್ ಮಾಡಿದ್ದಾರೆ.

ಈ ಸೌಹಾರ್ದಯುತ ವಾತಾವರಣವನ್ನು ಕೆಡಿಸುವ ಪ್ರಯತ್ನ ಮಹಾರಾಷ್ಟ್ರದ ಮುಖ್ಯಮಂತ್ರಿಗಳಿಂದ ಆಗುತ್ತಿರುವುದು ನೋವಿನ ಸಂಗತಿ. ಒಬ್ಬ ಭಾರತೀಯನಾಗಿ ಉದ್ಧವ್ ಠಾಕ್ರೆ ಅವರು ಒಕ್ಕೂಟ ತತ್ವವನ್ನು ಗೌರವಿಸುವ ಬದ್ಧತೆಯನ್ನು ತೋರಲಿ ಎಂದು ಆಗ್ರಹಿಸಿದ್ದಾರೆ.

Edited By : Vijay Kumar
PublicNext

PublicNext

18/01/2021 12:33 pm

Cinque Terre

75.43 K

Cinque Terre

4

ಸಂಬಂಧಿತ ಸುದ್ದಿ