ಬೆಂಗಳೂರು: ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಅವರು ಮೊದಲು ಇತಿಹಾಸ ಅಧ್ಯಯನ ಮಾಡಲಿ. ಆಗ ಅವರಿಗೆ ಯಾರು ಯಾರ ಭಾಗವನ್ನು ಅತಿಕ್ರಮಣ ಮಾಡಿಕೊಂಡಿದ್ದಾರೆ ಅನ್ನೋದು ಅರಿವಾಗುತ್ತೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಚೀನಾದ ವಿಸ್ತರಣಾವಾದವನ್ನೇ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಅನುಸರಿಸುತ್ತಿದ್ದಾರೆ. ಒಕ್ಕೂಟ ವ್ಯವಸ್ಥೆಯನ್ನು ಒಪ್ಪಿಕೊಂಡು, ಭಾಷಾವಾರು ಪ್ರಾಂತ್ಯಗಳ ಆಧಾರದ ಮೇಲೆ ರಾಜ್ಯಗಳು ರಚನೆಯಾಗಿವೆ. ಇದಕ್ಕೆ ಎಲ್ಲರೂ ಬದ್ಧರಾಗಿದ್ದಾರೆ. ಈ ವೇಳೆ ವಿಸ್ತರಣಾವಾದದ ಮಾತು ನಮ್ಮಲ್ಲಿನ ಸೌಹಾರ್ದಕ್ಕೆ ಧಕ್ಕೆ ತರುತ್ತದೆ. ಇತಿಹಾಸ ಓದಿಕೊಂಡರೆ ಯಾರು ಯಾರ ಪ್ರಾಂತ್ಯಗಳನ್ನು ಅತಿಕ್ರಮಿಸಿಕೊಂಡಿದ್ದಾರೆ ಎಂಬುದು ತಿಳಿಯುತ್ತದೆ ಎಂದರು.
ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ. ಎಂಈಎಸ್ ಮತ್ತು ಮಹಾರಾಷ್ಟ್ರಕ್ಕೆ ತಕ್ಕ ಉತ್ತರ ಕೊಡಬೇಕೆಂದೇ ನಾನು ಸಿಎಂ ಆಗಿದ್ದಾಗ ಅಲ್ಲಿ ಸುವರ್ಣ ವಿಧಾನಸೌಧ ನಿರ್ಮಿಸಲಾಗಿತ್ತು. ಅದನ್ನು ಅರಿಯುವಲ್ಲಿ ನಮ್ಮಲ್ಲಿನ ಕೆಲವರು ಎಡವಿದ್ದಾರೆ ಎಂಬುದೂ ವಾಸ್ತವ ಎಂದು ಕುಮಾರಸ್ವಾಮಿ ಹೇಳಿದ್ದರು.
PublicNext
18/01/2021 12:47 pm