ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಯಾವಾಗ ಜ್ಯೋತಿಷ್ಯ ಹೇಳುತ್ತಿದ್ದಾರೋ ಗೊತ್ತಿಲ್ಲ. ಈಗ ಪ್ರತಿಪಕ್ಷದ ನಾಯಕರಾಗಿದ್ದರೂ ಕೆಲಸ ಇಲ್ಲದೇ ಜ್ಯೋತಿಷ್ಯ ಕಲಿಯುತ್ತಿರಬಹುದು. ಅದಕ್ಕೆ ಮುಖ್ಯಮಂತ್ರಿಗಳ ಬದಲಾವಣೆ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗೆ ಈಗ ಪುರುಸೊತ್ತು ಇರಬೇಕು. ವಿರೋಧ ಪಕ್ಷದ ನಾಯಕರಾಗಿ ಮಾಡಬೇಕಾದ ಕೆಲಸವನ್ನು ಮಾಡುವುದು ಬಿಟ್ಟು ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ. ಮೊದಲಿಗೆ ಅವರ ಪಕ್ಷದಲ್ಲಾಗುತ್ತಿರುವುದನ್ನು ನೋಡಿಕೊಳ್ಳಲಿ. ನಮ್ಮ ಪಕ್ಷದ ಉಸಾಬರಿ ಏಕೆ? ಮುಖ್ಯಮಂತ್ರಿಗಳ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದರು.
PublicNext
19/01/2021 02:24 pm