ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಇದು ಪ.ಬಂ ಚುನಾವಣೆ ರಣತಂತ್ರವೇ ಮೋದಿ ಜೀ..?

ನವದೆಹಲಿ: ಪಶ್ಚಿಮ ಬಂಗಾಳದ ಜಲ್ಪೈಗುರಿಯಲ್ಲಿ ನಿನ್ನೆ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 13 ಜನ ಸಾವನ್ನಪ್ಪಿದ್ದು, ಮೃತರಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿ ಕಚೇರಿಯು, ಪಶ್ಚಿಮ ಬಂಗಾಳದ ಜಲ್ಪೈಗುರಿಯ ಧುಪ್ಗುರಿಯಲ್ಲಿ ಸಂಭವಿಸಿದ ರಸ್ತೆ ಅಪಘಾತವು ನೋವು ತಂದಿದೆ. ದುಃಖದ ಈ ಸಮಯದಲ್ಲಿ ಮೃತರ ಕುಟುಂಬಗಳೊಂದಿಗೆ ನಾವು ಇದ್ದೇವೆ. ಗಾಯಗೊಂಡವರು ಶೀಘ್ರದಲ್ಲೇ ಚೇತರಿಸಿಕೊಳ್ಳಲಿ ಎಂದು ತಿಳಿಸಿದೆ.

ಮತ್ತೊಂದು ಟ್ವೀಟ್ ಮಾಡಿ, ಅಪಘಾತದಲ್ಲಿ ಮೃತಪಟ್ಟ ಪ್ರತಿಯೊಬ್ಬರ ಕುಟುಂಬಕ್ಕೆ ಪ್ರಧಾನ ಮಂತ್ರಿ ವಿಪತ್ತು ಪರಿಹಾರ ನಿಧಿಯಿಂದ ತಲಾ ಎರಡು ಲಕ್ಷ ರೂ. ಹಾಗೂ ಗಾಯಾಳುಗಳ ಚಿಕಿತ್ಸೆಗಾಗಿ 50 ಸಾವಿರ ರೂ. ನೀಡಲಾಗುವುದು ಎಂದು ಭರವಸೆ ನೀಡಿದೆ.

ಈ ವಿಚಾರವಾಗಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ ಶುರುವಾಗಿದೆ. ಇದೇ ತಿಂಗಳು ಕರ್ನಾಟಕದ ಧಾರವಾಡದಲ್ಲಿ ಇಂತಹದ್ದೇ ಘಟನೆ ನಡೆದಿತ್ತು. ಪ್ರಧಾನಿ ಮೋದಿ ಸಂತಾಪ ಸೂಚಿಸಿದರು. ಆದರೆ ಯಾವುದೇ ಪರಿಹಾರದ ಮಾತುಗಳನ್ನು ಆಡಲಿಲ್ಲ. ಆದರೆ ಪಶ್ಚಿಮ ಬಂಗಾಳದ ಚುನಾವಣೆ ಹಿನ್ನೆಲೆಯಲ್ಲಿ ಸಂತಾಪದ ಜೊತೆಗೆ ಪರಿಹಾರವನ್ನು ಘೋಷಿಸಿದ್ದಾರೆ. ಇದು ಪಶ್ಚಿಮ ಬಂಗಾಳದ ಚುನಾವಣೆ ರಣತಂತ್ರವೇ ಮೋದಿ ಜೀ ಎಂದು ನೆಟ್ಟಿಗರು ಪ್ರಶ್ನಿಸಿ ಕುಟುಕಿದ್ದಾರೆ.

Edited By : Vijay Kumar
PublicNext

PublicNext

20/01/2021 01:37 pm

Cinque Terre

128.82 K

Cinque Terre

20